ಸೂಪರ್ ಹಿಟ್ ಸಿನಿಮಾ ‘ಬೆಲ್ ಬಾಟಮ್’ ನಿರ್ಮಾಪಕ ಸಂತೋಷ್ ಕುಮಾರ್ ಕೆಸಿ ಹೊಸ ಸಿನಿಮಾ ‘ಹುಬ್ಬಳ್ಳಿ ಹಂಟರ್ಸ್’ ಮೊದಲ ಹಂತದ ಶೂಟಿಂಗ್ ಮುಗಿಸಿದೆ.
ಸಂತೋಷ್ ಕುಮಾರ್ ಕೆಸಿ ತಮ್ಮದೇ ಗೋಲ್ಡನ್ ಹಾರ್ಸ್ ಸಿನಿಮಾ ಬ್ಯಾನರ್‌ನಡಿ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ. ಈ ಹಿಂದೆ ‘ಎಡಗೈ ಅಪಘಾತಕ್ಕೆ ಕಾರಣ’ ಚಿತ್ರ ನಿರ್ದೇಶಿಸಿದ್ದ ಸಮರ್ಥ್ ಬಿ ಕಡ್ಕೋಲ್ ಸಿನಿಮಾ ನಿರ್ದೇಶಕರು. ಹುಬ್ಬಳ್ಳಿಯಲ್ಲಿ ಮುಹೂರ್ತ ನೆರವೇರೆಸಿದ್ದ ಚಿತ್ರತಂಡ ಇದೀಗ ಹುಬ್ಬಳ್ಳಿ ನಗರದಲ್ಲಿ ಮೊದಲ ಹಂತದ 14 ದಿನ ಶೂಟಿಂಗ್ ಚಿತ್ರೀಕರಣ ನಡೆಸಿದೆ.
ಮಾರ್ಚ್ ತಿಂಗಳಲ್ಲಿ ಸೆಕೆಂಡ್ ಶೆಡ್ಯುಲ್ಡ್ ಶೂಟಿಂಗ್ ಶುರು ಮಾಡಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ. ಪ್ರಮೋದ್ ಶೆಟ್ಟಿ,ಮಹಾನಟಿ ಖ್ಯಾತಿಯ ಧನ್ಯಶ್ರೀ ಸುಜಿತ್ ಮುಖ್ಯಭೂಮಿಕೆಯಲ್ಲಿ ಅಭಿನಯಿಸುತ್ತಿದ್ದಾರೆ. ಭಾರತದಾದ್ಯಂತ ಇರುವ ಖ್ಯಾತ ಕಂಟೆಂಟ್ ಕ್ರಿಯೇಟರ್ಸ್ ಈ ಚಿತ್ರದಲ್ಲಿ ನಟಿಸುತ್ತಿರುವುದು ವಿಶೇಷ.
ಇದು ಉತ್ತರ ಕರ್ನಾಟಕ ಸೊಗಡಿನ ಕಥೆ. ಸಮರ್ಥ್ ಅವರು ಕಥೆ, ರಾಹುಲ್ ವಿ. ಪಾರ್ವತಿಕರ್, ಅಮಿತ್ ಕಾರ್ವ್ಕರ್ ಮತ್ತು ಚೇತನ್ ಮರಂಬೀದ್ ಸಂಭಾಷಣೆ ಜವಾಬ್ದಾರಿ ನಿಭಾಯಿಸಿದ್ದಾರೆ. ಅಭಿಮನ್ಯು ಸದಾನಂದನ್ ಛಾಯಾಗ್ರಹಣ, ಪ್ರಸನ್ನ ಕೇಶವ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ.
—-





Be the first to comment