ಬೆಂಗಳೂರು ಚಿತ್ರೋತ್ಸವಕ್ಕೆ ಪ್ರಕಾಶ್ ರಾಜ್ ರಾಯಭಾರಿ

17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ನಟ ಪ್ರಕಾಶ್ ರಾಜ್ ಅವರನ್ನು ರಾಯಭಾರಿಯಾಗಿ ಆಯ್ಕೆ ಮಾಡಲಾಗಿದೆ.

ವಿಧಾನಸೌಧದಲ್ಲಿ ಚಲನಚಿತ್ರೋತ್ಸವ ಸಂಬಂಧ ನಡೆದ ಸಭೆಯಲ್ಲಿ ಮಾತನಾಡಿದ  ಮುಖ್ಯಮಂತ್ರಿ ಸಿದ್ದರಾಮಯ್ಯ  ಅವರು, ಸಮಿತಿಯ ನಿರ್ಧಾರದಂತೆ ಪ್ರಕಾಶ್ ರಾಜ್ ಅವರನ್ನು ರಾಯಭಾರಿಯಾಗಿ ನೇಮಕ ಮಾಡಲಾಗಿದೆ ಎಂದರು.

ಬೆಂಗಳೂರು  ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ  ಜ.29ರಿಂದ ಫೆ.6ರವರೆಗೆ ಬೆಂಗಳೂರಿನಲ್ಲಿ ನಡೆಯಲಿದೆ.  ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ಸ್ ಮೇಲೆ ಚಲನಚಿತ್ರೋತ್ಸವದ ಉದ್ಘಾಟನೆ ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಚಿತ್ರೋತ್ಸವಕ್ಕೆ ಚಾಲನೆ ನೀಡಲಿದ್ದಾರೆ.

ಬೆಂಗಳೂರು ಚಲನಚಿತ್ರೋತ್ಸವದಲ್ಲಿ 60 ದೇಶಗಳ 200 ಸಿನಿಮಾಗಳು ಪ್ರದರ್ಶನಗೊಳ್ಳಲಿವೆ. ಒಟ್ಟು 400 ಪ್ರದರ್ಶನಗಳು ನಡೆಯಲಿವೆ. ಈ ವರ್ಷ ಆಸ್ಕರ್ ಪ್ರಶಸ್ತಿಗಳಿಗೆ ಶಾರ್ಟ್ ಲಿಸ್ಟ್ ಆಗಿರುವ ಸಿನಿಮಾಗಳನ್ನು   ಪ್ರದರ್ಶಿಸಲಾಗುತ್ತದೆ. ಮಹಿಳೆಯರ ಸಬಲೀಕರಣ ವಿಷಯವನ್ನು ಈ ವರ್ಷದ ಥೀಮ್ ಆಗಿ ಆಯ್ಕೆ ಮಾಡುವ ಚಿಂತನೆ ಇದೆ. ಇತ್ತೀಚೆಗೆ ನಿಧನರಾದ ಧರ್ಮೇಂದ್ರ, ಸರೋಜಾದೇವಿ, ಉಮೇಶ್, ಶಾಜಿ ಎನ್ ಕರುಣ್, ರಘು ಸೇರಿದಂತೆ ಹಲವು ಗಣ್ಯರ ಸ್ಮರಣಾರ್ಥ ಶ್ರದ್ಧಾಂಜಲಿ ಹಾಗೂ ಸವಿನೆನಪು ವಿಭಾಗದಲ್ಲಿ ವಿಶೇಷ ಚಿತ್ರ ಪ್ರದರ್ಶನ ನಡೆಯಲಿದೆ.

ಲೂಲು ಮಾಲ್‌ನಲ್ಲಿರುವ ಸಿನಿ ಪೊಲಿಸ್‌ನ 11 ಸ್ಕ್ರೀನ್‌ಗಳಲ್ಲಿ ಚಲನಚಿತ್ರ ಪ್ರದರ್ಶನ ನಡೆಯಲಿದೆ. ಇದುವರೆಗೆ 110 ಚಿತ್ರಗಳಿಂದ ಅರ್ಜಿ ಬಂದಿವೆ.

—-

 

Be the first to comment

Leave a Reply

Your email address will not be published. Required fields are marked *

Translate »
error: Content is protected !!