ಅಕ್ಟೋಬರ್ 31ಕ್ಕೆ ‘ಬಘೀರ’ ತೆರೆಗೆ

ರೋರಿಂಗ್ ಸ್ಟಾರ್ ಶ್ರೀಮುರಳಿ ನಟನೆಯ ಬಹುನಿರೀಕ್ಷಿತ ಚಿತ್ರ ‘ಬಘೀರ’  ಅಕ್ಟೋಬರ್ 31ಕ್ಕೆ ತೆರೆಗೆ ಬರುತ್ತಿದೆ.

ಚಿತ್ರಕ್ಕೆ  ಕೆಜಿಎಫ್​ ಖ್ಯಾತಿಯ ನಿರ್ದೇಶಕ ಪ್ರಶಾಂತ್‌ ನೀಲ್‌ ಕಥೆ ಬರೆದಿದ್ದಾರೆ. ಲಕ್ಕಿ ಸಿನಿಮಾ ಬಳಿಕ ಡಾ.ಸೂರಿ ನಿರ್ದೇಶನ ಮಾಡುತ್ತಿರುವ ಚಿತ್ರ ಇದಾಗಿದೆ. ಈ ಚಿತ್ರದಲ್ಲಿ ಶ್ರೀಮುರಳಿ ಎರಡು ಶೇಡ್​​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಶ್ರೀಮುರಳಿಗೆ ಜೋಡಿಯಾಗಿ ರುಕ್ಮಿಣಿ ವಸಂತ್‌ ಅಭಿನಯಿಸಿದ್ದಾರೆ. ಪ್ರಕಾಶ್‌ ರಾಜ್‌, ರಂಗಾಯಣ ರಘು, ಅಚ್ಯುತ್‌ ಕುಮಾರ್‌, ಗರುಡ ರಾಮ್‌  ತಾರಾಗಣದಲ್ಲಿದ್ದಾರೆ.

ಅಜನೀಶ್‌ ಲೋಕನಾಥ್‌ ಸಂಗೀತ, ಎ.ಜೆ ಶೆಟ್ಟಿ ಛಾಯಾಗ್ರಹಣ, ಪ್ರಣವ್‌ ಶ್ರೀ ಪ್ರಸಾದ್‌ ಸಂಕಲನ  ಚಿತ್ರಕ್ಕಿದೆ. ಹೊಂಬಾಳೆ ಫಿಲ್ಮ್ ಸಂಸ್ಥೆ ಬಘೀರ ಸಿನಿಮಾವನ್ನು ಬಹಳ ಅದ್ದೂರಿಯಾಗಿ ನಿರ್ಮಾಣ ಮಾಡುತ್ತಿದೆ.

ಬಘೀರ ಸಿನಿಮಾ ಕನ್ನಡ ಅಷ್ಟೇ ಅಲ್ಲದೇ ತಮಿಳು, ತೆಲುಗು, ಹಿಂದಿ, ಮಲಯಾಳಂ ಸೇರಿದಂತೆ ಬಹು ಭಾಷೆಯಲ್ಲಿ ಬಿಡುಗಡೆಯಾಗುತ್ತಿದೆ.

‘ಬಘೀರ’ ಸಿನಿಮಾದ ಟೀಸರ್ ಕಳೆದ ವರ್ಷ ಡಿಸೆಂಬರ್​ನಲ್ಲಿ ಬಿಡುಗಡೆ ಆಗಿತ್ತು. ಸಿನಿಮಾದ ಟೋನ್, ಕಲರ್ ಥೀಮ್ ‘ಕೆಜಿಎಫ್​’ ಮಾದರಿಯಲ್ಲಿಯೇ ಇರುವುದು ಟೀಸರ್​ನಿಂದ ಗೊತ್ತಾಗುತ್ತಿತ್ತು. ಟೀಸರ್ ಬಿಡುಗಡೆ ಮಾಡಿ ತಿಂಗಳುಗಳ ಬಳಿಕ ಈಗ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆ ಮಾಡಲಾಗಿದೆ. ಸಿನಿಮಾದ ಟ್ರೈಲರ್ ಮುಂದಿನ ತಿಂಗಳು ಬಿಡುಗಡೆ ಮಾಡುವ ಸಾಧ್ಯತೆ ಇದೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!