ಭಾರತಿ ಟೀಚರ್ ಏಳನೇ ತರಗತಿ

‘ಭಾರತಿ ಟೀಚರ್ ಏಳನೇ ತರಗತಿ’ ಹಾಡುಗಳ ಲೋಕಾರ್ಪಣೆ

‘ಭಾರತಿ ಟೀಚರ್ ಏಳನೇ ತರಗತಿ’ ಚಿತ್ರದ ಹಾಡುಗಳು ಇತ್ತೀಚೆಗೆ ಬಿಡುಗಡೆಯಾಗಿವೆ. ವಿ.ನಾಗೇಂದ್ರ ಪ್ರಸಾದ್ ಒಡೆತನದ ’ಮ್ಯೂಸಿಕ್ ಬಜಾರ್ ಸಂಸ್ಥೆಯು ಈ ಚಿತ್ರದ ಹಾಡುಗಳನ್ನು ಬಿಡುಗಡೆ ಮಾಡಿದೆ.

ಬಸವನಗುಡಿಯ ನ್ಯಾಷನಲ್ ಕಾಲೇಜು, ಡಾ.ಹೆಚ್.ನರಸಿಂಹಯ್ಯ ಸಭಾಂಗಣದಲ್ಲಿ ಈ ಹಾಡುಗಳು ಬಿಡುಗಡೆಯಾದವು. ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ದಾವಣಗೆರೆ ಮೂಲದ ಡಾ.ವಿ.ವಿಜಯಲಕ್ಷೀ ಮತ್ತು ಉದ್ಯಮಿ ವೀರಕಪುತ್ರ ಶ್ರೀನಿವಾಸ್ ತಲಾ ಒಂದೊಂದು ಹಾಡುಗಳನ್ನು ಲೋಕಾರ್ಪಣೆಗೊಳಿಸಿ ತಂಡಕ್ಕೆ ಶುಭ ಹಾರೈಸಿದರು.

ಭಾರತಿ ಟೀಚರ್ ಏಳನೇ ತರಗತಿ

ಸಿರಗುಪ್ಪ ಮೂಲದ ಉದ್ಯಮಿ ರಾಘವೇಂದ್ರ ರೆಡ್ಡಿ ಅವರು ಪೂಜ್ಯಾಯ ಫಿಲಂಸ್ ಅಡಿಯಲ್ಲಿ ಈ ಚಿತ್ರವನ್ನು ನಿರ್ಮಿಸಿದ್ದು, ಎಂ.ಎಲ್‍. ಪ್ರಸನ್ನ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ಬರೆದು ಸಂಗೀತ ಸಂಯೋಜಿಸಿ, ಚಿತ್ರವನ್ನೂ ನಿರ್ದೇಶಿಸಿದ್ದಾರೆ.

ಭಾರತಿ ಟೀಚರ್ ಏಳನೇ ತರಗತಿ

ಈ ಚಿತ್ರದಲ್ಲಿ ಸಿಹಿಕಹಿ ಚಂದ್ರು, ಕು. ಯಶಿಕಾ, ಗೋವಿಂದೇಗೌಡ, ಅಶ್ವಿನ್‌ ಹಾಸನ್, ದಿವ್ಯಾ ಅಂಚನ್, ಬೆನಕಾ ನಂಜಪ್ಪ, ರೋಹಿತ್‌ ರಾಘವೇಂದ್ರ, ಸೌಜನ್ಯ ಸುನಿಲ್ ಮುಂತಾದವರು ನಟಿಸಿದ್ದಾರೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!