ಸೆ. 15ರಂದು ವಿಷ್ಣು ಸ್ಮಾರಕಕ್ಕೆ ಗುದ್ದಲಿ ಪೂಜೆ ಆನ್ ಲೈನ್ ಮೂಲಕ ಸಿಎಂ ಚಾಲನೆ

ಅಭಿಮಾನಿಗಳ, ವಿಷ್ಣವರ್ಧನ್ ಕುಟುಂಬದವರ ಬಹುಕಾಲದ ಬೇಡಿಕೆ ವಿಷ್ಣುವರ್ಧನ್ ಸ್ಮಾರಕ ನಿರ್ಮಾಣಕ್ಕೆ ಹಸಿರು ನಿಶಾನೆ ಈಗಾಗಲೇ ದೊರೆತಿದ್ದು, ಕೆಲವೇ ದಿನಗಳಲ್ಲಿ ಗುದ್ದಲಿಪೂಜೆ ನೆರವೇರಲಿದೆ. ಸರ್ಕಾರಗಳ ಮೇಲೆ ಸತತ ಒತ್ತಾಯ, ಒತ್ತಡಗಳ ನಂತರ ಕಳೆದ ಡಿಸೆಂಬರ್ ನಲ್ಲಿ ಸಿಎಂ ಯಡಿಯೂರಪ್ಪ ಅವರು ಸ್ಮಾರಕ ನಿರ್ಮಾಣದ ಭರವಸೆ ನೀಡಿದ್ದರು. ಅಂತೆಯೇ ಈಗ ಸ್ಮಾರಕ ನಿರ್ಮಾಣ ಕಾರ್ಯ ಪ್ರಾರಂಭವಾಗಲಿದ್ದು, ಗುದ್ದಲಿ ಪೂಜೆ ಮೂಲಕ ಸ್ಮಾರಕ ನಿರ್ಮಾಣ ಕಾರ್ಯ ಪ್ರಾರಂಭ ವಾಗಬೇಕಿದೆ.

ಇದೇ ವಿಷಯವಾಗಿ ಇಂದು ನಟಿ  ಭಾರತಿ ವಿಷ್ಣುವರ್ಧನ್ ಹಾಗೂ ನಟ ಅನಿರುದ್ಧ ಅವರು ಸಿಎಂ ಯಡಿಯೂರಪ್ಪ ಅವರನ್ನು ಭೇಟಿಯಾದರು. ವಿಷ್ಣುವರ್ಧನ್ ಅವರ ಸ್ಮಾರಕ ನಿರ್ಮಾಣದ ಗುದ್ದಲಿ ಪೂಜೆಯನ್ನು ನೆರವೇರಿಸುವಂತೆ ಸಿಎಂ ಅವರಲ್ಲಿ ಮನವಿಯನ್ನು ಮಾಡಿದರು.

ಮೈಸೂರಿನಲ್ಲಿ ವಿಷ್ಣು ಸ್ಮಾರಕ ನಿರ್ಮಾಣ ಅಭಿಮಾನಿಗಳ ಆಸೆಯಂತೆ ಮೈಸೂರಿನಲ್ಲಿ ವಿಷ್ಣು ಸ್ಮಾರಕ ನಿರ್ಮಾಣಕ್ಕೆ ಕಾರ್ಯ ಪ್ರಾರಂಭವಾಗಿದ್ದು, ಸೆಪ್ಟೆಂಬರ್ 15 ರಂದು ಬೆಳಿಗ್ಗೆ 10:30 ಕ್ಕೆ ಮುಹೂರ್ತ ನಿಗದಿಪಡಿಸಲಾಗಿದೆ. ಕೋವಿಡ್ ಭೀತಿ ಇರುವ ಕಾರಣ ಸಿಎಂ ಅವರು ಆನ್‌ಲೈನ್ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!