ಶೀಘ್ರದಲ್ಲೇ ‘ಭೀಮ’ ಮೇಕಿಂಗ್ ವಿಡಿಯೋ

ದುನಿಯಾ ವಿಜಯ್ ನಿರ್ದೇಶಿಸಿ ನಾಯಕನಾಗಿ ಅಭಿನಯಿಸಿರುವ ‘ಭೀಮ’ ಚಿತ್ರದ ಮೇಕಿಂಗ್ ವಿಡಿಯೋ ಶೀಘ್ರದಲ್ಲೇ ಬಿಡುಗಡೆಯಾಗಲಿದೆ.

‘ಭೀಮ’ ಚಿತ್ರ ಸ್ಯಾಂಡಲ್ ವುಡ್ ನಲ್ಲಿ ಸಕ್ಕತ್ ಸೌಂಡ್ ಮಾಡುತ್ತಿದೆ.  ಶೀಘ್ರದಲ್ಲೇ ಚಿತ್ರದ ಮೇಕಿಂಗ್ ವಿಡಿಯೋ ಬಿಡುಗಡೆ ಮಾಡುವುದಾಗಿ ಚಿತ್ರತಂಡ ಸೋಶಿಯಲ್ ಮೀಡಿಯಾದಲ್ಲಿ ತಿಳಿಸಿದೆ. ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಮೇಕಿಂಗ್ ವಿಡಿಯೋ ರಿಲೀಸ್ ಆಗಲಿದೆ.

ಸಿನಿಮಾದಲ್ಲಿ ದುನಿಯಾ ವಿಜಯ್ ಅವರಿಗೆ ಜೋಡಿಯಾಗಿ ಅಶ್ವಿನಿ ಅಭಿನಯಿಸಿದ್ದಾರೆ. ಜಯಮ್ಮನ ಮಗ ಖ್ಯಾತಿಯ ಕಲ್ಯಾಣಿ, ಪ್ರಿಯಾ, ಬ್ಲ್ಯಾಕ್ ಡ್ರ್ಯಾಗನ್ ಮಂಜು ಬಣ್ಣ ಹಚ್ಚಿದ್ದಾರೆ. ಕೃಷ್ಣ ಕ್ರಿಯೇಷನ್ ಹಾಗೂ ಜಗದೀಶ್ ಫಿಲಂಸ್ ಬ್ಯಾನರ್ ನಲ್ಲಿ ಕಾರ್ತಿಕ್ ಸಾರ್ಥಕ್ ಹಾಗೂ ಜಗದೀಶ್ ಗೌಡ ಬಂಡವಾಳ ಹೂಡಿದ್ದಾರೆ.

ದೀಪು ಎಸ್ ಕುಮಾರ್ ಸಂಕಲನ, ಶಿವಸೇನಾ ಛಾಯಾಗ್ರಹಣ, ಚರಣ್ ರಾಜ್ ಸಂಗೀತ ಸಂಯೋಜನೆ ನೀಡಿದ್ದಾರೆ. ಮಾಸ್ತಿ ಡೈಲಾಗ್ ಬರೆದಿದ್ದಾರೆ.

ಈಗಾಗಲೇ ಚಿತ್ರದ ಹಾಡುಗಳು ಬಿಡುಗಡೆಯಾಗಿದ್ದು ಜನಪ್ರಿಯತೆ ಗಳಿಸಿವೆ. ಸಲಗ ಚಿತ್ರದ ನಂತರ ದುನಿಯಾ ವಿಜಯ್ ಅವರು ಭೀಮ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ.

—-

Be the first to comment

Leave a Reply

Your email address will not be published. Required fields are marked *

Translate »
error: Content is protected !!