ಆಗಸ್ಟ್ 3ಕ್ಕೆ ‘ಭೀಮ’ ಟ್ರೈಲರ್ ಬಿಡುಗಡೆ

ದುನಿಯಾ ವಿಜಯ್ ನಿರ್ದೇಶಿಸಿ ನಾಯಕನಾಗಿ ಅಭಿನಯಿಸಿರುವ ‘ಭೀಮ’ ಚಿತ್ರದ ಟ್ರೈಲರ್  ಆಗಸ್ಟ್ 3ರಂದು ರಿಲೀಸ್ ಮಾಡುವುದಾಗಿ ನಿರ್ಮಾಪಕ ಕೃಷ್ಣ ಸಾರ್ಥಕ್  ತಿಳಿಸಿದ್ದಾರೆ.

‘ಭೀಮ’ ಚಿತ್ರ  ಆಗಸ್ಟ್ 9ಕ್ಕೆ ರಾಜ್ಯಾದ್ಯಂತ ತೆರೆ ಕಾಣಲಿದ್ದು,  ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಈಗಾಗಲೇ ಹಾಡುಗಳ ಮೂಲಕವೇ ಭರ್ಜರಿ ಸೌಂಡ್ ಮಾಡಿರುವ ಈ ಸಿನಿಮಾದ ಮೇಲೆ ಪ್ರೇಕ್ಷಕರ ನಿರೀಕ್ಷೆ ಹೆಚ್ಚಿದೆ.

ಚಿತ್ರದಲ್ಲಿ ದುನಿಯಾ ವಿಜಯ್ ಹಾಗೂ ಅಶ್ವಿನಿ ಪ್ರಮುಖ ಪಾತ್ರದಲ್ಲಿದ್ದು, ಕಲ್ಯಾಣಿ ರಾಜು, ಪ್ರಿಯಾ ಶತಮರ್ಶನ್, ಅಚ್ಯುತ್ ಕುಮಾರ್, ರಂಗಾಯಣ ರಘು, ಕಾಕ್ರೋಚ್ ಸುಧಿ, ಉಳಿದ ಪಾತ್ರವರ್ಗದಲ್ಲಿದ್ದಾರೆ.

ಕೃಷ್ಣ ಕ್ರಿಯೇಶನ್ಸ್ ಮತ್ತು ಜಗದೀಶ ಫಿಲಂಸ್ ಬ್ಯಾನರ್ ನಡಿ ಕೃಷ್ಣ ಸಾರ್ಥಕ್ ಹಾಗೂ ಜಗದೀಶ್ ಗೌಡ ನಿರ್ಮಾಣ ಮಾಡಿದ್ದಾರೆ. ಚರಣ್ ರಾಜ್ ಸಂಗೀತ ಸಂಯೋಜನೆ ನೀಡಿದ್ದು ಶಿವ ಸೇನಾ ಅವರ ಛಾಯಾಗ್ರಹಣವಿದೆ.

ಭೀಮಾ ಚಿತ್ರದ ಹಾಡುಗಳು ಈಗಾಗಲೇ ಬಿಡುಗಡೆಗೊಂಡಿದ್ದು, ಸಾಕಷ್ಟು ಪ್ರಶಂಸೆಗೆ ಪಾತ್ರವಾಗಿವೆ.  ‘ಸಲಗ’ ಚಿತ್ರದ ಯಶಸ್ಸಿನ ಬಳಿಕ ದುನಿಯಾ ವಿಜಯ್ ಅವರು ಎರಡನೇ ಬಾರಿಗೆ ಭೀಮಾ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ.

—–

Be the first to comment

Leave a Reply

Your email address will not be published. Required fields are marked *

Translate »
error: Content is protected !!