ಭೈರಾದೇವಿ ಟ್ರೇಲರ್ ಬಿಡುಗಡೆ

ರಾಧಿಕಾ ಕುಮಾರಸ್ವಾಮಿ ನಿರ್ಮಿಸಿ, ನಾಯಕಿಯಾಗಿ ನಟಿಸಿರುವ ಬಹು ನಿರೀಕ್ಷಿತ “ಭೈರಾದೇವಿ” ಸಿನಿಮಾದ ಟ್ರೇಲರ್ ಬಿಡುಗಡೆ ಸಮಾರಂಭ ಇತ್ತೀಚೆಗೆ  ನೆರವೇರಿತು.

ಟ್ರೇಲರ್ ಬಿಡುಗಡೆ ನಂತರ ಮಾತನಾಡಿದ ರಾಧಿಕಾ ಕುಮಾರಸ್ವಾಮಿ, ನಿರ್ದೇಶಕ ಶ್ರೀಜೈ ನಮ್ಮ ಮನೆಗೆ ಬಂದು ಕಥೆ ಹೇಳಿದರು‌. ಕಥೆ ಇಷ್ಟವಾಗಿ, ಈ ಚಿತ್ರ ನಿರ್ಮಾಣಕ್ಕೆ ಹಾಗೂ ನಟಿಸಲು ಒಪ್ಪಿಕೊಂಡೆ. ಈ ಚಿತ್ರ ಆರಂಭವಾದಗಿನಿಂದ ಬಿಡುಗಡೆಯವರೆಗೂ ಸಾಕಷ್ಟು ಅಡೆತಡೆಗಳಾಗಿದೆ‌. “ಭೈರಾದೇವಿ” ಚಿತ್ರ ಪ್ರೇಕ್ಷಕರಿಗೆ ಇಷ್ಟ ಆದರೆ ಇನ್ನೊಂದು ಸಿನಿಮಾ ಮಾಡುತ್ತೀನಿ. ಇಷ್ಟ ಆಗಲಿಲ್ಲ ಎಂದರೆ ಚಿತ್ರರಂಗದಿಂದ ದೂರ ಆಗಿ ಬಿಡುತ್ತೀನಿ. ಇದು ದೊಡ್ಡ ಯಶಸ್ಸಾಗುತ್ತದೆ ಎಂಬ ನಂಬಿಕೆ ನನಗಿದೆ. ಕುಟುಂಬ ಸಮೇತ ನೋಡುವಂತಹ ಸಿನಿಮಾ ಇದು. ಈ ಚಿತ್ರದ ಸಂಪೂರ್ಣ ಕ್ರೆಡಿಟ್‍ ನಿರ್ದೇಶಕರಿಗೆ ಸಲ್ಲಬೇಕು’ ಎಂದರು.

”ನಾನು ಈ ಚಿತ್ರದಲ್ಲಿ ಪೊಲೀಸ್‍ ಅಧಿಕಾರಿ. ಅರವಿಂದ್ ನನ್ನ ಪಾತ್ರದ ಹೆಸರು.  ಆದರೆ ಈ ಚಿತ್ರದಲ್ಲಿ  ಬೇರೆ ಲೋಕದಿಂದ ಬಂದ ಒಂದು ಶಕ್ತಿಯ ವಿರುದ್ಧ ಹೋರಾಡಬೇಕು.   ಈ ಚಿತ್ರದ ಟ್ರೇಲರ್ ನೋಡಿದಾಗ, ನನಗೆ “ಆಪ್ತಮಿತ್ರ” ಚಿತ್ರ ನೆನಪಾಯಿತು. ರಾಧಿಕಾ ಕುಮಾರಸ್ವಾಮಿ ನಿರ್ಮಾಪಕಿ ಹಾಗೂ ನಾಯಕಿಯಾಗಿ ಎರಡು ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಕಾಳಿ ಪಾತ್ರದಲ್ಲಂತೂ ಅವರ ಅಭಿನಯ ಮನೋಜ್ಞ. ಅವರು ಆ ಪಾತ್ರದಲ್ಲಿ ಅಭಿನಯಿಸುತ್ತಿದ್ದಾಗ ಅವರೊಂದಿಗೆ ಮಾತನಾಡಲಿಕ್ಕೆ ಭಯವಾಗುತ್ತಿತ್ತು” ಎಂದರು ನಟ ರಮೇಶ್ ಅರವಿಂದ್.

‘ಹೃದಯ ಹೃದಯ ಚಿತ್ರ ತೆರೆಕಂಡು ಇಪ್ಪತ್ತೈದು ವರ್ಷಗಳಾಗಿದೆ.  ರಮೇಶ್ ಅವರ ಜೊತೆ ಮೊದಲ ಚಿತ್ರದಲ್ಲಿ ಅಭಿನಯಿಸಿದ್ದೆ. ಈಗ ಈ ಚಿತ್ರದಲ್ಲೂ ಅವರ ಜೊತೆ ನಟಿಸಿದ್ದೇನೆ. ರಾಧಿಕಾ ಕುಮಾರಸ್ವಾಮಿ ಅವರು ಅದ್ದೂರಿಯಾಗಿ ಈ ಚಿತ್ರ ನಿರ್ಮಾಣ ಮಾಡಿದ್ದಾರೆ. ಶ್ರೀಜೈ ಅವರ ಕಥೆಯೂ ಬಹಳ ಚೆನ್ನಾಗಿದೆ’ ಎಂದರು ಅನು ಪ್ರಭಾಕರ್.

ಶಮಿಕ ಎಂಟರ್ ಪ್ರೈಸಸ್ ಲಾಂಛನದಲ್ಲಿ ನಿರ್ಮಿಸಿದ “ಭೈರಾದೇವಿ” ಸಿನಿಮಾ ಅಕ್ಟೋಬರ್ 3 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

—-

Be the first to comment

Leave a Reply

Your email address will not be published. Required fields are marked *

Translate »
error: Content is protected !!