ಆಗಸ್ಟ್‌ 16ರಿಂದ ‘ಬಿಗ್‌ಬಾಸ್ ಕನ್ನಡ ಸೀಸನ್‌ 13’ ಆರಂಭ

ಕನ್ನಡದ ಅತಿ ದೊಡ್ಡ ರಿಯಾಲಿಟಿ ಶೋ ‘ಬಿಗ್‌ಬಾಸ್ ಕನ್ನಡ ಸೀಸನ್‌ 13’  ಆಗಸ್ಟ್‌ 16ರಿಂದ ಆರಂಭವಾಗಲಿದೆ.

ಹೊಸ ಪ್ರೋಮೋ ಬಿಡುಗಡೆ ಮಾಡಿರುವ ವಾಹಿನಿ ‘ಆಗಸ್ಟ್‌ 16ರ ರಾತ್ರಿ 9 ಗಂಟೆಗೆ ಬಿಗ್‌ಬಾಸ್ ಕನ್ನಡ ಸೀಸನ್‌ 13 ಆರಂಭವಾಗಲಿದೆ’ ಎಂದು ತಿಳಿಸಿದೆ. ಕಿಚ್ಚ ಸುದೀಪ್ ಸಾರಥ್ಯದ ‘ಬಿಗ್‌ಬಾಸ್ ಕನ್ನಡ’ ಶೋ ಪ್ರೇಕ್ಷಕರಲ್ಲಿ ಕುತೂಹಲ ಮೂಡಿಸಿದೆ.

ಈ ಬಾರಿಯೂ ಕಿಚ್ಚ ಸುದೀಪ್ ಕನ್ನಡ ಆವೃತ್ತಿಯನ್ನು ಮುನ್ನಡೆಸಲಿದ್ದಾರೆ.   ಹಿಂದಿಯಲ್ಲಿ ಸಲ್ಮಾನ್ ಖಾನ್, ತಮಿಳಿನಲ್ಲಿ ವಿಜಯ್ ಸೇತುಪತಿ, ತೆಲುಗಿನಲ್ಲಿ ನಾಗಾರ್ಜುನ,  ಮಲಯಾಳಂನಲ್ಲಿ ಮೋಹನ್ ಲಾಲ್ ಅವರು ನಿರೂಪಕರಾಗಿ ಮುಂದುವರಿಯಲಿದ್ದಾರೆ.  ಬಾಂಗ್ಲಾ ಆವೃತ್ತಿಗೆ ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಹೊಸ ನಿರೂಪಕರಾಗಿ ಎಂಟ್ರಿ ಕೊಡುತ್ತಿದ್ದಾರೆ.

ಈ ಬಾರಿ ಯಾರೆಲ್ಲಾ ಸ್ಪರ್ಧಿಗಳು ಮನೆಗೆ ಎಂಟ್ರಿ ಕೊಡಲಿದ್ದಾರೆ ಎಂಬ ಕುತೂಹಲ ಹೆಚ್ಚಾಗಿದೆ. ಕನ್ನಡ  ಆವೃತ್ತಿ  ಜಿಯೋಸ್ಟಾರ್ ಟೆಲಿವಿಷನ್ ನೆಟ್‌ವರ್ಕ್ ಹಾಗೂ ‘ಜಿಯೋಹಾಟ್‌ಸ್ಟಾರ್’ ಒಟಿಟಿ ಪ್ಲಾಟ್‌ಫಾರ್ಮ್‌ನಲ್ಲಿ ಲೈವ್ ಬರಲಿವೆ.

—-

Be the first to comment

Leave a Reply

Your email address will not be published. Required fields are marked *

Translate »
error: Content is protected !!