ಕನ್ನಡ ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 10ರ ಸ್ಪರ್ಧಿ ವರ್ತೂರು ಸಂತೋಷ್ ಅವರನ್ನು ಬಿಗ್ ಬಾಸ್ ಮನೆಯಿಂದ ಅರೆಸ್ಟ್ ಮಾಡಲಾಗಿದೆ.
ವರ್ತೂರು ಸಂತೋಷ್ ಅವರನ್ನು ಅರಣ್ಯಾಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಹುಲಿ ಉಗುರಿನ ಡಾಲರ್ ಧರಿಸಿದ್ದ ಆರೋಪದ ಮೇಲೆ ವರ್ತೂರು ಸಂತೋಷ್ ಅವರನ್ನು ಅರಣ್ಯಾಧಿಕಾರಿಗಳು ಭಾನುವಾರ ತಡರಾತ್ರಿ ಅರೆಸ್ಟ್ ಮಾಡಿದ್ದಾರೆ. ಸದ್ಯ ಅವರು ಅರಣ್ಯಾಧಿಕಾರಿಗಳ ಕಸ್ಟಡಿಯಲ್ಲಿದ್ದಾರೆ. ಅವರನ್ನು ಇಂದು ನ್ಯಾಯಾಧೀಶರ ಮುಂದೆ ಹಾಜರುಪಡಿಸುವ ಸಾಧ್ಯತೆಯಿದೆ.
ಹುಲಿಯ ಉಗುರಿನ ಡಾಲರ್ ಅನ್ನು ಕೊರಳಿಗೆ ಧರಿಸಿರುವ ಸಂತೋಷ್ ವನ್ಯಜೀವಿ ಸಂರಕ್ಷಣಾ ಕಾಯ್ದೆ ಉಲ್ಲಂಘಿಸಿದ್ದಾರೆ ಎಂದು ಅವರ ವಿರುದ್ಧ ವ್ಯಕ್ತಿಯೊಬ್ಬರು ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ವರ್ತೂರು ಸಂತೋಷ್ ಅವರನ್ನು ಅರಣ್ಯಾಧಿಕಾರಿಗಳು ಬಂಧಿಸಿ ಡಾಲರ್ ಜಪ್ತಿ ಮಾಡಿದ್ದಾರೆ.
ಮೇಲ್ನೋಟಕ್ಕೆ ಡಾಲರ್ನಲ್ಲಿ ಬಳಸಿರುವುದು ಹುಲಿ ಉಗುರು ಎಂಬುದು ಸಾಬೀತಾಗಿದೆ ಎಂದು ತಿಳಿದು ಬಂದಿದೆ. ವರ್ತೂರಿನಲ್ಲಿ ವ್ಯವಸಾಯ ಮಾಡಿಕೊಂಡಿರುವ ಸಂತೋಷ್ ಎತ್ತುಗಳ ಓಟದ ಸ್ಪರ್ಧೆಯಲ್ಲಿಯೂ ಖ್ಯಾತರಾದವರು. ಅವರು ಹಳ್ಳಿಕಾರ್ ತಳಿಯ ಎತ್ತುಗಳನ್ನು ಸಾಕಿ ಬೆಳೆಸುತ್ತಾರೆ.
ಅಕ್ಟೋಬರ್ 8 ರಿಂದ ಪ್ರಾರಂಭವಾದ ಬಿಗ್ ಬಾಸ್ ಸೀಸನ್ 10 ಶೋ, ಇಂದಿನಿಂದ ಮೂರನೇ ವಾರಕ್ಕೆ ಕಾಲಿಟ್ಟಿದೆ. ವರ್ತೂರು ಸಂತೋಷ್ ಅವರು ಶೋ ಮೂಲಕ ಒಳ್ಳೆ ಫ್ಯಾನ್ಸ್ ಫಾಲೋವಿಂಗ್ ಸಂಪಾದಿಸಿದ್ದಾರೆ. ಎರಡನೇ ವಾರ ಅವರು ನಾಮಿನೇಟ್ ಆಗಿದ್ರೂ , ಜನರ ವೋಟ್ ಅವರನ್ನು ಮನೆಯಲ್ಲೇ ಉಳಿಯುವಂತೆ ಮಾಡಿದೆ.
Be the first to comment