ಮುಂಬೈ: ಚೆಕ್ ಬೌನ್ಸ್ ಪ್ರಕರಣ ಸಂಬಂಧ ಮರಾಠಿ ಬಿಗ್ ಬಾಸ್ ಸ್ಪರ್ಧಿ ಅಭಿಜಿತ್ ನನ್ನು ಕಾರ್ಯಕ್ರಮ ನಡೆಯುತ್ತಿದ್ದ ವೇಳೆಯೇ ಸತಾರ ಪೊಲೀಸರು ಬಂಧಿಸಿದ ಘಟನೆ ಶುಕ್ರವಾರ ನಡೆದಿದೆ.
ಫಿಲ್ಮ್ ಸಿಟಿಯಲ್ಲಿ ಚಿತ್ರೀಕರಣವಾಗುತ್ತಿದ್ದ ಮರಾಠಿ ಬಿಗ್ ಬಾಸ್ 2 ಸೆಟ್ ಗೆ ದಾಳಿ ನಡೆಸಿದ ಪೊಲೀಸರು ಅಭಿಜಿತ್ ನನ್ನು ವಶಕ್ಕೆ ಪಡೆದಿದ್ದಾರೆ. ಸತಾರ ಕೋರ್ಟ್ ಜಾರಿ ಮಾಡಿದ ವಾರೆಂಟ್ ಆಧಾರದ ಮೇಲೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
2015ರ ಚೆಕ್ ಬೌನ್ಸ್ ಪ್ರಕರಣ ಸಂಬಂಧ ಕೋರ್ಟ್ ವಿಚಾರಣೆಯಲ್ಲಿ ಸಮನ್ಸ್ ಜಾರಿ ಮಾಡಿದರು ಅಭಿಜಿತ್ ಭಾಗಿಯಾಗದ ಹಿನ್ನಲೆ ಕೋರ್ಟ್ ವಾರೆಂಟ್ ಜಾರಿ ಮಾಡಿದೆ.

Pingback: plumbing company Fairfield Harbour