ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ಅವರು ಪೆಟ್ರೋಲ್ ಬಾಂಬ್ ಮಾದರಿಯಲ್ಲಿ ಸ್ಫೋಟ ಉಂಟುಮಾಡಿ ರೀಲ್ಸ್ ಶೂಟ್ ಮಾಡಿದ ವಿಡಿಯೋ ಹಂಚಿಕೊಂಡಿದ್ದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಸಾರ್ವಜನಿಕ ರಸ್ತೆಯಲ್ಲಿ ಈ ರೀತಿ ಅಪಾಯಕಾರಿ ಕೃತ್ಯ ಮಾಡಿ ವೀಡಿಯೊ ಚಿತ್ರೀಕರಿಸಿರುವುದು ಆತಂಕ ಉಂಟು ಮಾಡಿದೆ. ಘಟನೆ ಎಲ್ಲಿ ನಡೆದಿದೆ, ಯಾವಾಗ ಶೂಟ್ ಮಾಡಲಾಗಿದೆ ಎಂಬುದರ ಬಗ್ಗೆ ಸ್ಪಷ್ಟ ಮಾಹಿತಿ ಇನ್ನೂ ಲಭ್ಯವಾಗಿಲ್ಲ.
ಮುಂಜಾಗ್ರತಾ ಕ್ರಮಗಳಿಲ್ಲದೆ ಈ ರೀತಿಯ ಸ್ಫೋಟಕ ಕೃತ್ಯ ನಡೆಸಿರುವುದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಖಂಡನೆ ವ್ಯಕ್ತವಾಗುತ್ತಿದೆ. ಹಲವರು ರಜತ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಈ ರೀತಿಯ ಅಪಾಯಕಾರಿ ಸ್ಟಂಟ್ ವೇಳೆ ಅವಘಡ ಸಂಭವಿಸಿದ್ದರೆ ಅದರ ಹೊಣೆ ಯಾರು ಹೊರುತ್ತಿದ್ದರು ಎಂಬ ಪ್ರಶ್ನೆ ಉದ್ಭವಿಸಿದೆ. ಸಾರ್ವಜನಿಕ ಸುರಕ್ಷತೆಗೆ ಧಕ್ಕೆಯಾಗುವ ಈ ರೀತಿಯ ಕೃತ್ಯಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂಬ ಆಗ್ರಹ ಸಾರ್ವಜನಿಕ ವಲಯದಲ್ಲಿ ಕೇಳಿ ಬಂದಿದೆ.
ಈ ಹಿಂದೆ ರಜತ್ ಅವರು ವಿನಯ್ ಗೌಡ ಜೊತೆಗೂಡಿ ಸಾರ್ವಜನಿಕ ಸ್ಥಳದಲ್ಲಿ ಮಾರಕಾಸ್ತ್ರ ಹಿಡಿದು ರಿಲ್ಸ್ ಮಾಡಿ ಪೊಲೀಸ್ ಕೇಸ್ ಹಾಕಿಕೊಂಡಿದ್ದರು. ಈಗ ಮತ್ತೆ ಸಾರ್ವಜನಿಕರ ಆಸ್ತಿಪಾಸ್ತಿಗೆ ಹಾನಿ ಆಗುವ ರೀತಿಯಲ್ಲಿ ರೀಲ್ಸ್ ಮಾಡಿದ್ದಾರೆ ಎನ್ನುವ ಮಾತುಗಳು ಕೇಳಿ ಬರುತ್ತಿವೆ.
__





Be the first to comment