ʻಅಭಿನಯ ಚಕ್ರವರ್ತಿʼ ಕಿಚ್ಚ ಸುದೀಪ್ ಅವರ ಹುಟ್ಟುಹಬ್ಬದ ಪ್ರಯುಕ್ತ ಬಹುನಿರೀಕ್ಷಿತ ‘ಬಿಲ್ಲ ರಂಗ ಬಾಷಾ’ ಚಿತ್ರದ ಸ್ಪೆಷಲ್ ಪೋಸ್ಟರ್ ರಿಲೀಸ್ ಆಗಿದೆ.
ಬ್ಲಾಕ್‌ಬಸ್ಟರ್ ‘ವಿಕ್ರಾಂತ್ ರೋಣ’ ಸಿನಿಮಾದ ಭರ್ಜರಿ ಯಶಸ್ಸಿನ ಬಳಿಕ ಸುದೀಪ್ ಮತ್ತು ನಿರ್ದೇಶಕ ಅನೂಪ್ ಭಂಡಾರಿ ಈ ಚಿತ್ರಕ್ಕಾಗಿ ಕೈಜೋಡಿಸಿದ್ದಾರೆ. ಬಿಡುಗಡೆಯಾಗಿರುವ ಹೊಸ ಪೋಸ್ಟರ್ ರೋಮಾಂಚಕವಾಗಿದ್ದು, ಚಿತ್ರ ವಿಶ್ವದರ್ಜೆಯ ಮೇಕಿಂಗ್ ಒಳಗೊಂಡಿದೆ ಎಂಬುದಕ್ಕೆ ಸಾಕ್ಷಿ ಒದಗಿಸಿದೆ.
ತೆಲುಗಿನ ಪ್ಯಾನ್-ಇಂಡಿಯಾ ಹಿಟ್ ಸಿನಿಮಾ ‘ಹನುಮಾನ್’ ಖ್ಯಾತಿಯ ಕೆ. ನಿರಂಜನ್ ರೆಡ್ಡಿ ಹಾಗೂ ಚೈತನ್ಯ ರೆಡ್ಡಿ ಈ ಬಿಗ್ ಬಜೆಟ್ ಸಿನಿಮಾವನ್ನು ಜಂಟಿಯಾಗಿ ನಿರ್ಮಿಸುತ್ತಿದ್ದಾರೆ. ‘ಬಿಲ್ಲ ರಂಗ ಬಾಷಾ’ ಚಿತ್ರಕ್ಕಾಗಿ ಬೆಂಗಳೂರಿನಲ್ಲಿ ಬೃಹತ್ ಸೆಟ್ ನಿರ್ಮಿಸಲಾಗಿದ್ದು, ಸದ್ಯ ಚಿತ್ರೀಕರಣ ಭರದಿಂದ ಸಾಗುತ್ತಿದೆ.
2027ರ ಮಾರ್ಚ್ ಒಳಗೆ ಟೀಸರ್ ಬಿಡುಗಡೆ ಆಗಲಿದ್ದು, 2027ರ ಜುಲೈ-ಸೆಪ್ಟೆಂಬರ್ ನಡುವೆ ಟ್ರೇಲರ್, ಹಾಡುಗಳು ಅನಾವರಣಗೊಳ್ಳಲಿವೆ. ‘ಬಿಲ್ಲ ರಂಗ ಬಾಷಾ’ 2027ರ ವರ್ಷಾಂತ್ಯದಲ್ಲಿ ವಿಶ್ವದಾದ್ಯಂತ ಅದ್ಧೂರಿಯಾಗಿ ತೆರೆಗೆ ಬರಲಿದೆ.
—–





Be the first to comment