‘ಬ್ಲಿಂಕ್’ ಮಾರ್ಚ್ 8ಕ್ಕೆ ಬಿಡುಗಡೆ

ದೀಕ್ಷಿತ್ ಶೆಟ್ಟಿ ಅಭಿನಯದ `ಬ್ಲಿಂಕ್’ ಮಾರ್ಚ್ 8ಕ್ಕೆ ತೆರೆ ಮೇಲೆ ಬರಲು ಸಜ್ಜಾಗಿದೆ.

ಜನನಿ ಪಿಕ್ಚರ್ಸ್ ನಿರ್ಮಾಣದಲ್ಲಿ ಮೂಡಿಬರುತ್ತಿರುವ ‘ಬ್ಲಿಂಕ್’  ಚಿತ್ರವು ಸೈಫೈ ಪ್ರಕಾರದ ಚಿತ್ರವಾಗಿದ್ದು ಪ್ರೇಕ್ಷಕರನ್ನು ಸೆಳೆಯುವುದು ಖಂಡಿತವೆಂದು ನಿರ್ಮಾಪಕ ರವಿಚಂದ್ರ ಎ ಜೆ ಹೇಳುತ್ತಾರೆ .

ತಮ್ಮ ಚೊಚ್ಚಲ ನಿರ್ದೇಶನದಲ್ಲೇ ಚಿತ್ರದ ಟೀಸರ್ ಹಾಗೂ ಹಾಡುಗಳ ಮೂಲಕ ಜನರ ಮನಸ್ಸನ್ನು ಗೆದ್ದಿರುವ ನಿರ್ದೇಶಕ ಶ್ರೀನಿಧಿ, ” ಇದೊಂದು ಕಾಲ್ಪನಿಕ ಕಥೆಯಾಗಿದ್ದು ಕನ್ನಡ ಚಿತ್ರರಂಗದಲ್ಲಿ ಈ ಪ್ರಕಾರದ ಚಿತ್ರಗಳು ತೀರಾ ಕಡಿಮೆ ತೆರೆ ಕಂಡಿದೆ.  ಈ ಚಿತ್ರವು ನೋಡುಗರಲ್ಲಿ ಹೊಸತನ ಮೂಡಿಸುತ್ತದೆ” ಎಂದು  ಹೇಳುತ್ತಾರೆ.

ದಿಯಾʼ, ʻದಸರಾʼ ಖ್ಯಾತಿಯ ನಟ ದೀಕ್ಷಿತ್ ಶೆಟ್ಟಿ ನಾಯಕ ನಟ, ಮಂದಾರ ಬಟ್ಟಲಹಳ್ಳಿ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಇತ್ತೀಚಿಗೆ ತೆರೆಕಂಡ ‘ಟೋಬಿ’ ಮತ್ತು ‘ಸಪ್ತಸಾಗರದಾಚೆ ಎಲ್ಲೋ 2’ ಚಿತ್ರದ ಸುರಭಿ ಪಾತ್ರಧಾರಿ ಚೈತ್ರ ಜೆ ಆಚಾರ್ ಬ್ಲಿಂಕ್ ಚಿತ್ರದಲ್ಲಿ ಮುಖ್ಯಭೂಮಿಕೆಯಲ್ಲಿ ಅಭಿನಯಿಸಿದ್ದಾರೆ.

ಚಿತ್ರಕ್ಕೆ ವಜ್ರಧೀರ್ ಜೈನ್, ಗೋಪಾಲಕೃಷ್ಣ ದೇಶಪಾಂಡೆ , ಕಿರಣ್ ನಾಯ್ಕ್ ಮುರುಳಿ ಶೃಂಗೇರಿ , ಸುರೇಶ್ ಅನಗಹಳ್ಳಿ ಸೇರಿದಂತೆ ದೊಡ್ಡ ತಾರಾಬಳಗವಿದೆ.  ಪ್ರಸನ್ನ ಕುಮಾರ್ ಎಂ ಎಸ್  ಸಂಗೀತ ನಿರ್ದೇಶನ, ಅವಿನಾಶ ಶಾಸ್ರ್ತಿ ಕ್ಯಾಮೆರಾ, ಸಂಜೀವ್ ಜಾಗೀರ್ದಾರ್  ಸಂಕಲನವಿದೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!