‘ಕಬ್ಜ’ ಮೇಲೆ ಬಾಲಿವುಡ್ ಕಣ್ಣು

‘ಕೆಜಿಎಫ್​ 2’ ಮತ್ತು ‘ಕಾಂತಾರ’ ಚಿತ್ರಗಳು ಬಾಲಿವುಡ್​ ಚಿತ್ರಗಳ ಗಳಿಕೆಯನ್ನೂ ಮೀರಿಸಿ ಹೊಸ ದಾಖಲೆಯನ್ನು ನಿರ್ಮಿಸಿದ ನಂತರ ಬಾಲಿವುಡ್​ನ ಕಣ್ಣು ಉಪೇಂದ್ರ ಮತ್ತು ಸುದೀಪ್​ ಅಭಿನಯದ ಅದ್ಧೂರಿ ಚಿತ್ರ ‘ಕಬ್ಜ’ ಮೇಲೆ ಬಿದ್ದಿದೆ.

ಬಾಲಿವುಡ್ನ ಖ್ಯಾತ ಸಿನಿಮಾ ವಿಶ್ಲೇಷಕ ತರಣ್ ಆದರ್ಶ್ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟರ್ ಹಂಚಿಕೊಳ್ಳುವ ಜತೆಗೆ ಚಿತ್ರದ ಬಿಡುಗಡೆ ದಿನಾಂಕಕ್ಕೆ ಎದುರು ನೋಡುತ್ತಿರುವುದಾಗಿ ಹೇಳಿದ್ದಾರೆ.

ಶ್ರೀ ಸಿದ್ಧೇಶ್ವರ ಎಂಟರ್​ಪ್ರೈಸಸ್​ ನಿರ್ಮಿಸಿರುವ ‘ಕಬ್ಜ’ ಚಿತ್ರದ ಚಿತ್ರೀಕರಣ ಮುಗಿದಿದೆ. ಇತ್ತೀಚೆಗೆ ಟೀಸರ್​ ಸಹ ಬಿಡುಗಡೆಯಾಗಿದೆ. ಟೀಸರ್​ಗೆ ಎಲ್ಲಡೆಯಿಂದ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗಿದ್ದು, ಚಿತ್ರದ ಬಿಡುಗಡೆಗೆ ಪ್ರೇಕ್ಷಕರು ಕಾತುರದಿಂದ ಕಾಯುತ್ತಿದ್ದಾರೆ.

ಚಿತ್ರತಂಡ ಇನ್ನಷ್ಟೇ ಚಿತ್ರದ ಬಿಡುಗಡೆಯ ದಿನಾಂಕವನ್ನು ಅಧಿಕೃತವಾಗಿ ಘೋಷಣೆ ಮಾಡಬೇಕಿದೆ. ಆರ್​. ಚಂದ್ರು ನಿರ್ದೇಶನದ ‘ಕಬ್ಜ’ ಚಿತ್ರವು ಪ್ಯಾನ್​ ಇಂಡಿಯಾ ಚಿತ್ರವಾಗಿದ್ದು ಏಳು ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗಲಿದೆ.

ಉಪೇಂದ್ರ ಜತೆಗೆ ಸುದೀಪ್​ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಶ್ರೀಯಾ ಶರಣ್​, ನವಾಬ್​ ಷಾ, ಕಬೀರ್​ ಸಿಂಗ್​ ದುಹಾನ್​, ಪ್ರಮೋದ್​ ಶೆಟ್ಟಿ, ಮುರಳಿ ಶರ್ಮ ಮುಂತಾದವರು ಅಭಿನಯಿಸಿದ್ದಾರೆ.

‘ಕೆಜಿಎಫ್​’ ಖ್ಯಾತಿಯ ಸಂಗೀತ ನಿರ್ದೇಶಕ ರವಿ ಬಸ್ರೂರು ಚಿತ್ರಕ್ಕೆ ಸಂಗೀತ ಸಂಯೋಜಿಸಿದ್ದಾರೆ.
___

Be the first to comment

Leave a Reply

Your email address will not be published. Required fields are marked *

Translate »
error: Content is protected !!