ಡಿಸೆಂಬರ್ 9ಕ್ಕೆ ಬಾಂಡ್ ರವಿ

ಡಿಸೆಂಬರ್ 9ರಂದು ‘ಬಾಂಡ್ ರವಿ’ ಪ್ರೇಕ್ಷಕರನ್ನು ರಂಜಿಸಲು ಚಿತ್ರಮಂದಿರಕ್ಕೆ ಬರಲಿದೆ.

‘ರತ್ನನ್ ಪ್ರಪಂಚ’ ಚಿತ್ರದಲ್ಲಿ ಉಡಾಳ್ ಬಾಬು ಪಾತ್ರದ ಮೂಲಕ ಖ್ಯಾತಿ ಗಳಿಸಿರುವ ಪ್ರಮೋದ್ ‘ಬಾಂಡ್ ರವಿ’ಯಾಗಿ ಹೊಸ ಅವತಾರದಲ್ಲಿ ಬರಲು ಸಿದ್ಧರಾಗಿದ್ದಾರೆ. ಪ್ರಮೋದ್ ಸಿನಿ ಕೆರಿಯರ್ ನ ಬಹು ನಿರೀಕ್ಷಿತ ಚಿತ್ರ ಇದಾಗಿದೆ. ಚಿತ್ರ ಟೀಸರ್ ಹಾಗೂ ಹಾಡಿನ ಮೂಲಕ ಉತ್ತಮ ರೆಸ್ಪಾನ್ಸ್ ಪಡೆದುಕೊಂಡಿದೆ.

ಆಕ್ಷನ್ ಲವ್ ಸ್ಟೋರಿ ಒಳಗೊಂಡ ಈ ಚಿತ್ರಕ್ಕೆ ಪ್ರಜ್ವಲ್ ಎಸ್.ಪಿ ಆಕ್ಷನ್ ಕಟ್ ಹೇಳಿದ್ದಾರೆ. ನರಸಿಂಹಮೂರ್ತಿ ವಿ. ಲೈಫ್ ಲೈನ್ ಫಿಲಂ ಬ್ಯಾನರ್ ನಡಿ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಮಲ್ಲಿಕಾರ್ಜುನ್ ಕಾಶಿ ಹಾಗೂ ಝೇವಿಯರ್ ಫರ್ನಾಂಡಿಸ್ ಸಹ ನಿರ್ಮಾಣ ಚಿತ್ರಕ್ಕಿದೆ.

ಕಾಜಲ್ ಕುಂದರ್ ನಾಯಕಿಯಾಗಿ ನಟಿಸಿದ್ದಾರೆ. ರವಿಕಾಳೆ, ಧರ್ಮ, ವಿಜಯ್ ಚೆಂಡೂರ್, ಶೋಭರಾಜ್ ಚಿತ್ರದ ತಾರಾ ಬಳಗದಲ್ಲಿದ್ದಾರೆ.

ಕೆ.ಎಸ್. ಚಂದ್ರಶೇಖರ್ ಛಾಯಾಗ್ರಹಣ, ಅರ್ಜುನ್ ಕಿಟ್ಟು ಸಂಕಲನ, ಸುನೀಲ್ ಮತ್ತು ದೇವ್ ಎನ್. ರಾಜ್ ಸಂಭಾಷಣೆ, ಮನೋಮೂರ್ತಿ ಸಂಗೀತ ನಿರ್ದೇಶನ ಚಿತ್ರಕ್ಕಿದೆ.

ಚಿತ್ರದ ಎರಡು ಹಾಡುಗಳು ಬಿಡುಗಡೆಯಾಗಿ ಎಲ್ಲರ ಗಮನ ಸೆಳೆದಿವೆ. ವಿ ನಾಗೇಂದ್ರ ಪ್ರಸಾದ್ ಸಾಹಿತ್ಯದ ವಿಜಯ ಪ್ರಕಾಶ್ ದನಿಯಾಗಿರುವ ‘ಮಜ ಮಜ ಮಾಡು ಬಾ’, ಜಯಂತ್ ಕಾಯ್ಕಿಣಿ ಸಾಹಿತ್ಯದ ಸೋನು ನಿಗಂ ದನಿಯಾಗಿರುವ ರೋಮ್ಯಾಂಟಿಕ್ ಸಾಂಗ್ ‘ಸಹಜ ಸಖಿ ಹಾಡುಗಳು ಮೆಚ್ಚುಗೆ ಪಡೆದಿವೆ.
___

Be the first to comment

Leave a Reply

Your email address will not be published. Required fields are marked *

Translate »
error: Content is protected !!