ನಟ ದರ್ಶನ್ ಅವರ ಜೀವನದ ಘಟನೆಗಳಿಗೆ ಸಾಮ್ಯತೆ ಹೊಂದಿದೆ ಎನ್ನುವ ಆರೋಪ ಇರುವ ‘ಬಾಸ್ ’ ಚಿತ್ರ ಏಪ್ರಿಲ್ನಲ್ಲಿ ರಾಜ್ಯಾದ್ಯಂತ ಬಿಡುಗಡೆಯಾಗುವ ನಿರೀಕ್ಷೆ ಇದೆ.
‘ಬಾಸ್’ ಚಿತ್ರವನ್ನು ಸೆನ್ಸಾರ್ ಮಂಡಳಿಯು ಪರಿಶೀಲಿಸಿ ‘ಯು/ಎ’ ಪ್ರಮಾಣಪತ್ರ ನೀಡಿದೆ. ಕೆಲ ದೃಶ್ಯಗಳಿಗೆ ಮತ್ತು ಸಂಭಾಷಣೆಗಳಿಗೆ ಕತ್ತರಿ ಹಾಕಿರುವ ಮೂಲಕ ಚಿತ್ರ ಪ್ರದರ್ಶನಕ್ಕೆ ಅನುಮತಿ ದೊರೆತಿದೆ.
ಚಿತ್ರತಂಡ ಈಗ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದೆ. ಲವ ನಿರ್ದೇಶನದ ಈ ಚಿತ್ರದಲ್ಲಿ ತನುಷ್ ಶಿವಣ್ಣ ಮುಖ್ಯ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಟೀಸರ್ ಬಿಡುಗಡೆಯಿಂದಲೇ ‘ಬಾಸ್’ ಸಿನಿಮಾ ಭಾರೀ ಚರ್ಚೆ ಹುಟ್ಟುಹಾಕಿದೆ. ಚಿತ್ರ ರೇಣುಕಾಸ್ವಾಮಿ ಕೊಲೆ ಪ್ರಕರಣದ ಸಂದರ್ಭದೊಂದಿಗೆ ಸಮ್ಮಿಲಿತವಾಗಿದೆ ಎಂಬ ಅಭಿಪ್ರಾಯ ಇದೆ.
ದರ್ಶನ್ ಪರ ವಕೀಲರು ಚಿತ್ರತಂಡ ಮತ್ತು ಸೆನ್ಸಾರ್ ಮಂಡಳಿಗೆ ನೋಟಿಸ್ ನೀಡಿದ್ದರು. ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಹಾಗೂ ಸಹೋದರ ದಿನಕರ್ ತೂಗುದೀಪ ಅವರಿಂದ ಸೆನ್ಸಾರ್ ಮಂಡಳಿಗೆ ಭೇಟಿ ನೀಡಿ ಚಿತ್ರಕ್ಕೆ ಪ್ರಮಾಣಪತ್ರ ನೀಡದಂತೆ ಮನವಿ ಸಲ್ಲಿಸಲಾಗಿತ್ತು.
ಸಾಕಷ್ಟು ವಿವಾದ ಎಬ್ಬಿಸಿರುವ ‘ಬಾಸ್’ ಚಿತ್ರ ಯಾವ ರೀತಿ ಯಶಸ್ಸು ಗಳಿಸುತ್ತದೆ ಎನ್ನುವ ಕುತೂಹಲ ಚಿತ್ರ ಪ್ರೇಮಿಗಳಲ್ಲಿ ಉಂಟಾಗಿದೆ.





Be the first to comment