ತೆಲುಗಿನಲ್ಲಿ ಸಾಕಷ್ಟು ಹಿಟ್ ಚಿತ್ರ ನೀಡಿರುವ ಬೋಯಪಾಟಿ ಶ್ರೀನು ನಿರ್ದೇಶನದ ಸಿನಿಮಾದಲ್ಲಿ ರಾಕಿಂಗ್ ಸ್ಟಾರ್ ಯಶ್ ನಟಿಸಲಿದ್ದಾರೆ ಎಂದು ತಿಳಿದು ಬಂದಿದೆ.
ಬೋಯಪಾಟಿ ಶ್ರೀನು ನಿರ್ದೇಶಿಸಲಿರುವ ಮುಂದಿನ ಸಿನಿಮಾ ಪ್ಯಾನ್ ಇಂಡಿಯಾ ಸಿನಿಮಾ ಆಗಿರಲಿದೆ.
ಬೋಯಪಾಟಿ ಶ್ರೀನು ಸದ್ಯ ನಂದಮೂರಿ ಬಾಲಕೃಷ್ಣ ನಟನೆಯ ‘ಅಖಂಡ’ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈಗಾಗಲೇ ಈ ಸಿನಿಮಾದ ಟೀಸರ್ ಬಿಡುಗಡೆ ಆಗಿದ್ದು ಸಾಕಷ್ಟು ವೈರಲ್ ಆಗಿದೆ.
ನಟ ಯಶ್ ನಟನೆಯ ‘ಕೆಜಿಎಫ್ 2’ ಸಿನಿಮಾ ಮುಂದಿನ ಕೆಲ ದಿನಗಳಲ್ಲಿ ಬಿಡುಗಡೆ ಆಗುವ ನಿರೀಕ್ಷೆ ಹೊಂದಲಾಗಿದೆ. ಜುಲೈ 16ಕ್ಕೆ ಸಿನಿಮಾ ಬಿಡುಗಡೆ ಆಗಬೇಕಿತ್ತು. ಆದರೆ ಕೊರೊನಾ ಹಿನ್ನೆಲೆಯಲ್ಲಿ ಚಿತ್ರದ ಬಿಡುಗಡೆ ಮುಂದಕ್ಕೆ ಹೋಗಿತ್ತು.
ಸದ್ಯ ನರ್ತನ್ ನಿರ್ದೇಶನದ ಸಿನಿಮಾದಲ್ಲಿ ಯಶ್ ನಟಿಸುತ್ತಿದ್ದಾರೆ. ಸಿನಿಮಾದಲ್ಲಿ ಯಶ್ ನೌಕಾ ಪಡೆಯ ಅಧಿಕಾರಿಯ ಪಾತ್ರ ಮಾಡುತ್ತಿದ್ದಾರೆ. ಕೆಜಿಎಫ್ ಸಿನೆಮಾ ಸೂಪರ್ ಹಿಟ್ ಆದ ನಂತರ ಯಶ್ ಅವರು ಸಾಕಷ್ಟು ಎಚ್ಚರಿಕೆಯಿಂದ ಪಾತ್ರಗಳನ್ನು ಮಾಡುತ್ತಿದ್ದಾರೆ. ಕೆಜಿಎಫ್ ಸಿನೆಮಾ ಯಶ್ ಗೆ ಪ್ಯಾನ್ ಇಂಡಿಯಾ ಸ್ಟಾರ್ ಎನ್ನುವ ಖ್ಯಾತಿಯನ್ನು ತಂದು ಕೊಟ್ಟಿದೆ.
Be the first to comment