‘ಸಿ’ ಸಾಂಗ್ ರಿಲೀಸ್

ಹೊಸಬರ ‘ಸಿ’ ಸಿನಿಮಾದ ‘ಇದು ಎ ಅಲ್ಲ ಬಿ ಅಲ್ಲ ಸಿ…’ ಎನ್ನುವ ಟೈಟಲ್ ಟ್ರ್ಯಾಕ್ ರಿಲೀಸ್ ಆಗಿದೆ.

ಎಬಿ ಮುರಳಿಧರನ್ ಸಂಗೀತ ಸಂಯೋಜನೆಯಲ್ಲಿ ಮೂಡಿ ಬಂದಿರುವ ಈ ಹಾಡಿಗೆ ಶಶಾಂಕ್ ಶೇಷಗಿರಿ, ಸುರಭಿ ಭಾರದ್ವಜ್ ಹಾಗೂ ಜ್ಞಾನ ಹಾಡಿದ್ದಾರೆ. ಈ ಹಾಡಿಗೆ ಖ್ಯಾತ ಚಿತ್ರ ಸಾಹಿತಿ ವಿ.ನಾಗೇಂದ್ರ ಪ್ರಸಾದ್ ಸಾಹಿತ್ಯ ರಚಿಸಿದ್ದಾರೆ.

ಈ ಹಾಡನ್ನು ಲೂಸ್ ಮಾದ ಖ್ಯಾತಿಯ ನಟ ಯೋಗಿ ರಿಲೀಸ್  ಮಾಡಿ ಸಿನಿಮಾ ತಂಡಕ್ಕೆ ಶುಭ ಹಾರೈಸಿದ್ದಾರೆ. ಯೋಗಿ ಹೊಸ ಸಿನಿಮಾ ತಂಡದ ಬೆನ್ನಿಗೆ ನಿಂತಿರುವುದು ಸಿ ಚಿತ್ರತಂಡಕ್ಕೆ ಖುಷಿ ತಂದಿದೆ.  ಖ್ಯಾತ ಚಿತ್ರ ಸಾಹಿತಿ ವಿ ನಾಗೇಂದ್ರ ಪ್ರಸಾದ್ ಕೂಡ   ಸಿನಿಮಾದ ಹಾಡಿನ್ನು ನೋಡಿ ಮೆಚ್ಚಿಕೊಂಡಿದ್ದಾರೆ.   ಸಿನಿಮಾಗೆ ಒಳ್ಳೆದಾಗಲಿ, ಕನ್ನಡ ಚಿತ್ರರಂಗ ಬೆಳೆಯಲಿ ಎಂದು ಹಾರೈಸಿದ್ದಾರೆ.

‘ಸಿ’ ಕಿರಣ್ ಸುಬ್ರಮಣಿ ಚೊಚ್ಚಲ ನಿರ್ದೇಶನದ ಸಿನಿಮಾ. ಕಿರಣ್ ನಿರ್ದೇಶನದ ಜೊತೆಗೆ ಸಿನಿಮಾದ ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ.  ಕಿರಣ್ ಅವರಿಗೆ ಇದು ಮೊದಲ ಸಿನಿಮಾ. ಈಗಾಗಲೇ ಕಿರಣ್ಅ ನೇಕ ಸಿನಿಮಾಗಳಲ್ಲಿ ಕೆಲಸ ಮಾಡಿ ಅನುಭವ ಹೊಂದಿದ್ದಾರೆ.   ಸಿ ಸಿನಿಮಾ ಮೂಲಕ ಮೊದಲ ಬಾರಿಗೆ ಸ್ವಾತಂತ್ರ ನಿರ್ದೇಶಕರಾಗಿದ್ದಾರೆ.

ಸಿ ಸಿನಿಮಾ ತಂದೆ- ಮಗಳ ಬಾಂಧವ್ಯದ ಜೊತೆಗೆ ಮೆಡಿಕಲ್ ಮಾಫಿಯಾದ ಬಗ್ಗೆ ಇದೆ. ಎಜಿಎಸ್ ಪ್ರೊಡಕ್ಷನ್ ನಡಿ  ನಾಯಕ ಕಿರಣ್ ಅವರ ತಂದೆ ಸುಬ್ರಮಣಿ ಅವರು ಸಿನಿಮಾ ನಿರ್ಮಾಣ ಮಾಡಿದ್ದಾರೆ.

ಈ ಸಿನಿಮಾ ಈಗಾಗಲೇ ಟೀಸರ್ ಮತ್ತು ಕಂದಾ ಕಂದಾ ಎನ್ನುವ ಹಾಡಿನ ಮೂಲಕ ಅಭಿಮಾನಿಗಳ ನಿರೀಕ್ಷೆ ಹೆಚ್ಚಿಸಿದೆ. ಸಿನಿಮಾ ಆಗಸ್ಟ್‌ 23ಕ್ಕೆ ತೆರೆಗೆ ಬರುತ್ತಿದೆ.

—-

Be the first to comment

Leave a Reply

Your email address will not be published. Required fields are marked *

Translate »
error: Content is protected !!