ಬೆಟ್ಟಿಂಗ್ ಆ್ಯಪ್ನಲ್ಲಿ ಭಾಗಿಯಾಗಿದ್ದ ಪ್ರಕಾಶ್ ರಾಜ್ ಸೇರಿ ಬರೋಬ್ಬರಿ 29 ಸೆಲೆಬ್ರಿಟಿಗಳ ವಿರುದ್ಧ ಜಾರಿ ನಿರ್ದೇಶನಾಲಯ ಕೇಸ್ ದಾಖಲಿಸಿದೆ.
ನಟ ವಿಜಯ ದೇವರಕೊಂಡ, ರಾಣಾ ದಗ್ಗುಬಾಟಿ, ಪ್ರಕಾಶ್ ರಾಜ್, ಮಂಚು ಲಕ್ಷ್ಮಿ, ನಿಧಿ ಅಗರವಾಲ್, ಆ್ಯಂಕರ್ ಶ್ರೀಮುಖಿ ಸೇರಿದಂತೆ ಸಿನಿಮಾ ತಾರೆಯರು, ಸೋಶಿಯಲ್ ಮೀಡಿಯಾ ಇನ್‌ಫ್ಲ್ಯೂಯೆನ್ಸರ್‌ಗಳು ಹಾಗೂ ಯೂಟ್ಯೂಬರ್ ಗಳ ವಿರುದ್ಧ ಪಿಎಂಎಲ್‌ಎ ಕಾಯಿದೆಯಡಿ ಇ.ಡಿ. ಕೇಸ್ ದಾಖಲಿಸಿಕೊಂಡಿದೆ.
ಬೆಟ್ಟಿಂಗ್ ಆಪ್‌ಗಳನ್ನು ಪ್ರಚಾರ ಮಾಡಿದ ಸೆಲೆಬ್ರಿಟಿಗಳ ವಿರುದ್ಧ ಕೇಸ್ ದಾಖಲಿಸಲಾಗಿದೆ. ಆಂಧ್ರ ಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳಲ್ಲಿ ಬೆಟ್ಟಿಂಗ್ ಆಪ್ ವಿರುದ್ಧ ಐದು ಪ್ರತ್ಯೇಕ ದೂರುಗಳನ್ನು ದಾಖಲಿಸಲಾಗಿತ್ತು ಈಗ ಸ್ಟಾರ್ ನಟರ ವಿರುದ್ಧ ಜಾರಿ ನಿರ್ದೇಶನಾಲಯ ದೂರು ದಾಖಲಿಸಿದೆ.
ಈ ಹಿಂದೆ ತೆಲಂಗಾಣ ರಾಜ್ಯದಲ್ಲಿ ಪ್ರಕಾಶ್ ರಾಜ್ ಸೇರಿದಂತೆ ಇತರ ವಿರುದ್ಧ ಕೇಸು ದಾಖಲಿಸಿದ ವೇಳೆ ಪ್ರಕಾಶ್ ರಾಜ್ ಅವರು ನಾನು ಈ ರೀತಿಯ ಬೆಟ್ಟಿಂಗ್ ಆಪ್ ನಲ್ಲಿ ಪ್ರಚಾರ ಮಾಡಬಾರದಿತ್ತು. ತನ್ನಿಂದ ತಪ್ಪಾಗಿದೆ ಎಂದು ಹೇಳಿದ್ದರು.
ಸೆಲೆಬ್ರೆಟಿಗಳು ಬೆಟ್ಟಿಂಗ್ ಆಪ್ ನಲ್ಲಿ ಪ್ರಚಾರ ಮಾಡುತ್ತಿರುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ಈ ಹಿಂದಿನಿಂದ ಸಾಕಷ್ಟು ಆಕ್ರೋಶ ವ್ಯಕ್ತವಾಗುತ್ತಲೇ ಇದೆ.
—-





Be the first to comment