ಪ್ರಶಾಂತ್ ಸಂಬರಗಿ ವಿರುದ್ಧ ದೂರು

ಕುಂಭಮೇಳದಲ್ಲಿ ಪುಣ್ಯಸ್ನಾನದ ನಕಲಿ ಫೊಟೋ ಹರಿಬಿಡುತ್ತಿರುವುದರ ವಿರುದ್ಧ ನಟ ಪ್ರಕಾಶ್ ರಾಜ್ ಅವರು ಪ್ರಶಾಂತ್ ಸಂಬರಗಿ ವಿರುದ್ಧ ದೂರು ನೀಡಿದ್ದಾರೆ.

ಪ್ರಶಾಂತ್ ಸಂಬರಗಿ ಅವರು ನನ್ನ ಖ್ಯಾತಿಗೆ ಕುತ್ತು ತರುವ ಉದ್ದೇಶದಿಂದ ಉದ್ದೇಶಪೂರ್ವಕವಾಗಿ ಪೇಸ್‌ಬುಕ್‌ನಲ್ಲಿ ನನ್ನ ಹೆಸರು ಬಳಸಿ ಕೃತಕ ಬುದ್ದಿಮತ್ತೆಯ ಮೂಲಕ ಸೃಷ್ಟಿಸಿದ ಭಾವಚಿತ್ರ ಬಳಸಿದ್ದು, ಸುಳ್ಳು ಶೀರ್ಷಿಕೆ ನೀಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಲಕ್ಷ್ಮಿಪುರಂ ಠಾಣೆಯಲ್ಲಿ  ಪ್ರಕರಣ ದಾಖಲಾಗಿದೆ.

‘ಪ್ರಶಾಂತ್ ಸಂಬರಗಿ ನಟಿಯರೂ ಸೇರಿದಂತೆ ಅನೇಕರಿಗೆ ಈ ರೀತಿ ತೊಂದರೆ ನೀಡಿದ್ದಾರೆ.  ಸಾಮಾಜಿಕ ಜಾಲತಾಣದಲ್ಲಿ ನಕಲಿ ಸುದ್ದಿ ಹರಡುವವರಿಗೂ ಇದೊಂದು ಪಾಠವಾಗಬೇಕು ಎಂಬ ಕಾರಣಕ್ಕೆ ದೂರು ನೀಡಿದ್ದೇನೆ’ ಎಂದು ನಟ ಪ್ರಕಾಶ್ ರಾಜ್ ತಿಳಿಸಿದ್ದಾರೆ.

‘ಪ್ರಶಾಂತ್ ಸಂಬರಗಿ ಅವರಿಗೆ ಇ ಮೇಲ್ ಮೂಲಕ ನೋಟಿಸ್ ಕಳುಹಿಸಿದ್ದು, ತನಿಖೆ ಮುಂದುವರೆದಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

‘ಕುಂಭಮೇಳದಲ್ಲಿ ಸ್ನಾನ ಮಾಡುವುದರಲ್ಲಿ ತಪ್ಪೇನಿದೆ? ಅದು ಅವರ ನಂಬಿಕೆ. ನನಗೆ ದೇವರ ಮೇಲೆ ನಂಬಿಕೆಯಿಲ್ಲ. ಮನುಷ್ಯರ ಮೇಲೆ ನಂಬಿಕೆ. ದೇವರಿಲ್ಲದೆ ಬದುಕಬಹುದು ಆದರೆ, ಮನುಷ್ಯರಿಲ್ಲದೆ ಬದುಕಲು ಸಾಧ್ಯವಿಲ್ಲ. ಹಾಗೆಂದು ಅವರ ನಂಬಿಕೆಯನ್ನು ಪ್ರಶ್ನಿಸುವುದಿಲ್ಲ. ಆದರೆ ಅದನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ತಪ್ಪು’ ಎಂದು ಪ್ರಕಾಶ್ ರಾಜ್ ತಿಳಿಸಿದ್ದಾರೆ.

—-

 

Be the first to comment

Leave a Reply

Your email address will not be published. Required fields are marked *

Translate »
error: Content is protected !!