ಚಾಂಪಿಯನ್ ಟ್ರೇಲರ್ ರಿಲೀಸ್

ಸಚಿನ್ ಧನಪಾಲ್, ಅದಿತಿ ಪ್ರಭುದೇವ ನಾಯಕ, ನಾಯಕಿಯಾಗಿ ನಟಿಸಿರುವ “ಚಾಂಪಿಯನ್” ಚಿತ್ರದ ಟ್ರೇಲರ್ ಡೈನಾಮಿಕ್ ಸ್ಟಾರ್ ದೇವರಾಜ್ ಅವರಿಂದ ಇತ್ತೀಚಿಗೆ ಬಿಡುಗಡೆಯಾಯಿತು.‌

ಹದಿನಾಲ್ಕು ವರ್ಷಗಳ ಹಿಂದೆ ನನ್ನ ಸ್ನೇಹಿತ ಸಚಿನ್ ಧನಪಾಲ್ ಗೆ ನನಗೇನಾದರೂ ತುಂಬಾ ದುಡ್ಡು ಬಂದರೆ ನಿನ್ನನ್ನು ಸಿನಿಮಾ ಹೀರೋ ಮಾಡುತ್ತೀನಿ ಎಂದಿದ್ದೆ. ಈಗ ಆ ಮಾತು ನಿಜವಾಗಿದೆ. ಸಚಿನ್ ಧನಪಾಲ್ ನಾಯಕನಾಗಿ ನಟಿಸಿರುವ “ಚಾಂಪಿಯನ್” ಚಿತ್ರ ಅಕ್ಟೋಬರ್ 14 ರಂದು ಬಿಡುಗಡೆಯಾಗಲಿದೆ. 2019 ರಲ್ಲಿ ಈ ಚಿತ್ರ ಆರಂಭವಾಯಿತು. ಕೋವಿಡ್, ಚಿತ್ರದ ನಿರ್ದೇಶಕ ಶಾಹುರಾಜ್ ಶಿಂಧೆ ಹಠಾತ್ ನಿಧನ ಈ ರೀತಿ ಹಲವು ಅಡೆತಡೆಗಳನ್ನು ದಾಟಿ ಈಗ ಚಿತ್ರ ಬಿಡುಗಡೆ ಹಂತ ತಲುಪಿದೆ‌ ಎಂದು ನಿರ್ಮಾಪಕ ಶಿವಾನಂದ ಎಸ್ ನೀಲಣ್ಣನವರ್ ಹೇಳಿದರು.
ಉತ್ತರ ಕರ್ನಾಟಕದ ನನ್ನ ಸ್ನೇಹಿತರು ತಮ್ಮದೇ ಚಿತ್ರ ಅನ್ನುವ ಹಾಗೆ ಭರ್ಜರಿ ಪ್ರಚಾರ ಮಾಡುತ್ತಿದ್ದಾರೆ. ನನ್ನ ಹಾಗೂ ಸಚಿನ್ ಕುಟುಂಬದವರು ಸಾಕಷ್ಟು ಜನ ಆರ್ಮಿಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಆರ್ಮಿಯಲ್ಲಿ ನಮಗೆ ಸಾಕಷ್ಟು ಸ್ನೇಹಿತರಿದ್ದಾರೆ. ಅವರೆಲ್ಲರ ಬೆಂಬಲ ಕೂಡ ನಮ್ಮಗಿದೆ. ಟ್ರೇಲರ್ ಬಿಡುಗಡೆ ಮಾಡಿಕೊಟ್ಟ ದೇವರಾಜ್ ಅವರಿಗೆ ಹಾಗೂ ನನ್ನ ಇಡೀ ಚಿತ್ರತಂಡಕ್ಕೆ ಧನ್ಯವಾದ ಎಂದರು.

ಈ ಚಿತ್ರಕ್ಕಾಗಿ ಸಾಕಷ್ಟು ತಯಾರಿ ಮಾಡಿಕೊಂಡಿದ್ದೀನಿ. ಅದಿತಿ ಪ್ರಭುದೇವ ಸೇರಿದಂತೆ ಎಲ್ಲರ ಅಭಿನಯ ಚೆನ್ನಾಗಿದೆ. ಸನ್ನಿಲಿಯೋನ್ ಈ ಚಿತ್ರದ ಹಾಡೊಂದಕ್ಕೆ ಹೆಜ್ಜೆ ಹಾಕಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ ಎಂದು ಸಚಿನ್ ಧನಪಾಲ್ ಹೇಳಿದರು.

ಮೊದಲ ಚಿತ್ರದಲ್ಲೇ ಸಚಿನ್ ಚೆನ್ನಾಗಿ ನಟಿಸಿದ್ದಾರೆ. ನನ್ನ‌ ಪಾತ್ರ ಕೂಡ ಚೆನ್ನಾಗಿದೆ. ನಿಮ್ಮೆಲ್ಲರ ಬೆಂಬಲ ನಮ್ಮ ಚಿತ್ರಕ್ಕಿರಲಿ ಎಂದು ನಟಿ‌ ಅದಿತಿ ಪ್ರಭುದೇವ ತಿಳಿಸಿದರು.

ನನ್ನ ಮನೆಗೆ ಶಿವಾನಂದ್ ಹಾಗೂ ಸಚಿನ್ ಅವರು ಬಂದಾಗ ನಿರ್ಮಾಪಕ ಹಾಗೂ ಹೀರೋ ಬಂದಿದ್ದಾರೆ ಅಂದು ಕೊಂಡಿದ್ದೆ. ಆನಂತರ ಇವರ ಸ್ನೇಹದ ಬಗ್ಗೆ ತಿಳಿದು ಆನಂದವಾಯಿತು. ನಾನು ಕೂಡ ಈ ಚಿತ್ರದಲ್ಲಿ ನಟಿಸಿದ್ದೇನೆ ಎಂದರು ನಟ ದೇವರಾಜ್.ಚಿತ್ರ ಅಕ್ಟೋಬರ್ 14 ರಂದು ತೆರೆಗೆ ಬರುತ್ತಿದೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!