ಚಂದನ್ -ನಿವೇದಿತಾ 4 ವರ್ಷಗಳ ದಾಂಪತ್ಯ ಅಂತ್ಯ

ರ್‍ಯಾಪರ್‌ ಚಂದನ್ ಶೆಟ್ಟಿ  ಮತ್ತು ನಿವೇದಿತಾ ಗೌಡ ಅವರ ನಾಲ್ಕು ವರ್ಷಗಳ ದಾಂಪತ್ಯ ಅಂತ್ಯವಾಗಿದೆ.

ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಅವರು ಪರಸ್ಪರ ಒಪ್ಪಿಗೆ ಮೇರೆಗೆ ವಿಚ್ಛೇದನ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್​ ಪುರಸ್ಕರಿಸಿದ್ದು,  ಬೆಂಗಳೂರು ಕೌಟುಂಬಿಕ ನ್ಯಾಯಾಲಯ ವಿಚ್ಛೇದನ ಮಂಜೂರು ಮಾಡಿ ಆದೇಶ ಹೊರಡಿಸಿದೆ.

ಕಾರಣಾಂತರಗಳಿಂದ  ಈ ಜೋಡಿ ಪ್ರತ್ಯೇಕವಾಗಿರಲು ಬಯಸಿ ವಿಚ್ಛೇದನ ಕೋರಿ ಬೆಂಗಳೂರಿನ ಶಾಂತಿನಗರದ ಫ್ಯಾಮಿಲಿ ಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಿತ್ತು. ಪರಸ್ಪರ ಒಪ್ಪಂದದ ಮೇರೆಗೆ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರಿಂದ ಕೋರ್ಟ್ ವಿಚ್ಛೇದನ ಮಂಜೂರು ಮಾಡಿ ಆದೇಶ ಹೊರಡಿಸಿದೆ.

ಚಂದನ್​ ಹಾಗೂ ನಿವೇದಿತಾ ವಿಚ್ಛೇದನ ಅರ್ಜಿ  ಜೂನ್ 7ರಂದು ಕೌಟುಂಬಿಕ ನ್ಯಾಯಾಲಯದ ನ್ಯಾಯಾಧೀಶರಾದ ಕೆ.ಎಸ್ ಜ್ಯೋತಿ ಶ್ರೀ ಅವರು ಬೆಂಚ್​ ಮುಂದೆ ಬಂದಿತ್ತು.  ಅರ್ಜಿಯನ್ನು ವಿಚಾರಣೆ ಮಾಡುವ ಮೊದಲು ಕಾನೂನು ಪ್ರಕ್ರಿಯೆಯಂತೆ ಚಂದನ್ ಹಾಗೂ ನಿವೇದಿತಾ ಅವರಿಗೆ ಕೌಟುಂಬಿಕ ಕೋರ್ಟ್‌ನ ಮಿಡಿಯೇಷನ್​ ಸೆಂಟರ್​ನಲ್ಲಿ ಮಾತುಕತೆ ನಡೆಸಲಾಯಿತು. ವಿಚ್ಛೇದನ ಪ್ರಕ್ರಿಯೆ ಮೊದಲು  ಸಂಧಾನಕಾರರು ಮಾತುಕತೆ ನಡೆಸಿದಾಗ ಇಬ್ಬರು ತಮ್ಮ ನಿರ್ಧಾರದಿಂದ ಹಿಂದೆ ಸರಿದಿಲ್ಲ. ಅಂತಿಮವಾಗಿ ಕೋರ್ಟ್​ ವಿಚ್ಛೇದನ ನೀಡಿ ಆದೇಶಿಸಿದೆ.

ಇವರಿಬ್ಬರ ವಿಚ್ಛೇದನಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ನಾನಾ ರೀತಿಯ ಸುದ್ದಿ ಹರಿದಾಡುತ್ತಿವೆ. ಚಂದನ್​ ಹಾಗೂ ನಿವೇದಿತಾ ತಮ್ಮ ವಿಚ್ಛೇದನಕ್ಕೆ ನಿರ್ದಿಷ್ಟ ಕಾರಣ ಏನು ಎನ್ನುವುದನ್ನು ಬಹಿರಂಗಪಡಿಸಿಲ್ಲ.

2017ರಲ್ಲಿ ಪ್ರಸಾರವಾದ ಬಿಗ್​ ಬಾಸ್​ ಕನ್ನಡ ಸೀಸನ್​ 5 ಶೋನಲ್ಲಿ ನಿವೇದಿತಾ ಗೌಡ ಮತ್ತು ಚಂದನ್​ ಶೆಟ್ಟಿ ಭಾಗವಹಿಸಿದ್ದರು. ನಂತರ ಇಬ್ಬರು ಪರಸ್ಪರ ಪ್ರೀತಿಸಿ, ಕುಟುಂಬದವರ ಒಪ್ಪಿಗೆ ಪಡೆದು 2020ರಲ್ಲಿ ವಿವಾಹವಾಗಿದ್ದರು.

—–

Be the first to comment

Leave a Reply

Your email address will not be published. Required fields are marked *

Translate »
error: Content is protected !!