ಶೀಘ್ರ ‘777 ಚಾರ್ಲಿ’ ಸಾಂಗ್ ರಿಲೀಸ್

ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ನಟನೆಯ ‘777 ಚಾರ್ಲಿ’ ಸಿನಿಮಾದ ಸಾಂಗ್ ರಿಲೀಸ್ ಮಾಡಲು ಚಿತ್ರತಂಡ ಯೋಜನೆ ರೂಪಿಸಿದೆ.

777 ಚಾರ್ಲಿ ಸಿನಿಮಾ ಕನ್ನಡ ಅಲ್ಲದೇ ತಮಿಳು, ತೆಲುಗು, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. 777 ಚಾರ್ಲಿ ಸಿನಿಮಾ ಟೀಸರ್ ಗೆ ಉತ್ತಮ ಪ್ರತಿಕ್ರಿಯೆ ದೊರೆತ ನಂತರ ಸಿನಿಮಾ ತಂಡ ಸಾಂಗ್ ರಿಲೀಸ್ ಗೆ ಮುಂದಾಗಿದೆ. ಐದು ಭಾಷೆಗಳಲ್ಲಿ ಪ್ರಸಿದ್ಧ ಹಿನ್ನೆಲೆ ಗಾಯಕರು ಈಗಾಗಲೇ ಹಾಡಿಗೆ ಧ್ವನಿಯಾಗಿದ್ದಾರೆ.

ಜಸ್ಸಿ ಗಿಫ್ಟ್, ಮಲಯಾಳಂನಲ್ಲಿ ಹಾಡನ್ನು ಹಾಡಿದ್ದಾರೆ. ಗಾನ ಬಾಲಚಂದರ್ ತಮಿಳು, ವಿಜಯ್ ಪ್ರಕಾಶ್ ಕನ್ನಡ, ರಾಮ್ ಮಿರಿಯಾಲ ಅವರು ತೆಲುಗು, ಸ್ವರೂಪ್ ಖಾನ್ ಹಿಂದಿ ಭಾಷೆಗಳಲ್ಲಿ ಹಾಡಿದ್ದಾರೆ.

ಕಿರಣ್‌ರಾಜ್ ನಿರ್ದೇಶಿಸಿರುವ 777 ಚಾರ್ಲಿ ಚಿತ್ರದಲ್ಲಿ ರಕ್ಷಿತ್ ಶೆಟ್ಟಿಯ ಜೊತೆಗೆ ಲ್ಯಾಬ್ರಡಾರ್ ನಾಯಿ ಮುಖ್ಯ ಪಾತ್ರ ನಿರ್ವಹಿಸುತ್ತಿದೆ. ಸಂಗೀತ ಶೃಂಗೇರಿ ನಾಯಕಿಯರಾಗಿರುವ ಈ ಚಿತ್ರದಲ್ಲಿ ರಾಜ್ ಬಿ ಶೆಟ್ಟಿ, ಡ್ಯಾನಿಶ್ ಸೇಠ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರದ ಮೂಲಕ ಬಾಬಿ ಸಿಂಹ ಅವರು ಕನ್ನಡ ಚಿತ್ರಕ್ಕೆ ಎಂಟ್ರಿ ಕೊಟ್ಟಿದ್ದಾರೆ.

ಪರಮಾವ್ ಸ್ಟುಡಿಯೋಸ್ ಬ್ಯಾನರ್ ನಲ್ಲಿ ಈ ಚಿತ್ರ ತಯಾರಾಗುತ್ತಿದ್ದು ಜಿಎಸ್ ಗುಪ್ತಾ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಚಿತ್ರಕ್ಕೆ ನೋಬಿನ್ ಪೌಲ್ ಸಂಗೀತ ನೀಡಿದ್ದಾರೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!