ಪ್ರಜ್ವಲ್ ದೇವರಾಜ್, ಮೇಘಾ ಶೆಟ್ಟಿ ನಟಿಸುತ್ತಿರುವ ‘ಚೀತಾ’ ಚಿತ್ರದ ಚಿತ್ರೀಕರಣ ಭರದಿಂದ ಸಾಗಿದೆ.
ಚಿತ್ರದಲ್ಲಿ ಮಾರುಕಟ್ಟೆಯಲ್ಲೇ ಹುಟ್ಟಿ ಬೆಳೆದ ಹುಡುಗ ಅಲ್ಲಿ ನಡೆಯುವ ಅವ್ಯವಹಾರಗಳ ವಿರುದ್ದ ಹೋರಾಟ ಮಾಡುವ ಕಥೆ ಇದೆ.
ರಾಜಲಕ್ಷ್ಮಿ ಎಂಟರ್‌ಟೈನ್‌ಮೆಂಟ್ ಲಾಂಛನದಲ್ಲಿ ಪ್ರತಿಭಾ ನರೇಶ್ ನಿರ್ಮಿಸುತ್ತಿರುವ ಚಿತ್ರಕ್ಕೆ ನೃತ್ಯ ನಿರ್ದೇಶಕ ರಾಜ ಕಲೈ ಕುಮಾರ್ ಅವರ ನಿರ್ದೇಶನವಿದೆ.
‘ಕಳೆದ 23 ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ಡ್ಯಾನ್ಸರ್ ಆಗಿ, ಡ್ಯಾನ್ಸ್ ಮಾಸ್ಟರ್ ಆಗಿ ಕಾರ್ಯನಿರ್ವಹಿಸಿದ್ದೇನೆ. ಇದು ನನ್ನ ನಿರ್ದೇಶನದ ಮೊದಲ ಚಿತ್ರ’ ಎಂದು ನಿರ್ದೇಶಕ ರಾಜ ಕಲೈ ಕುಮಾರ್ ಹೇಳಿದ್ದಾರೆ.
ನೃತ್ಯ ನಿರ್ದೇಶಕ ಚಿನ್ನಿಪ್ರಕಾಶ್, ಗುರು ಜಗ್ಗೇಶ್, ಶೃತಿ ಹರಿಹರನ್, ರಂಗಾಯಣ ರಘು, ಶಿವರಾಜ್ ಕೆ ಆರ್ ಪೇಟೆ, ಸಿದ್ಲಿಂಗು ಶ್ರೀಧರ್, ಟೆನ್ನಿಸ್ ಕೃಷ್ಣ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.
—–

Be the first to comment