Chetan: ಚೇತನ್ ಅಹಿಂಸಾ ಅರೆಸ್ಟ್

ಹಿಂದುತ್ವದ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ಕಾರಣಕ್ಕೆ ನಟ ಚೇತನ್ ಅಹಿಂಸಾ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಶೇಷಾದ್ರಿಪುರಂ ಪೊಲೀಸರುಚೇತನ್ ಅವರನ್ನು ಬಂಧಿಸಿ ಮ್ಯಾಜಿಸ್ಟ್ರೇಟ್ ಕೋರ್ಟ್ ಮುಂದೆ ಹಾಜರುಪಡಿಸಿದ್ದಾರೆ. ಐಪಿಸಿ ಸೆಕ್ಷನ್ 295A 505B ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಚೇತನ್ ಮಾಡಿದ ಪೋಸ್ಟ್‌ ಸಂಬಂಧ ಹಿಂದೂಪರ ಸಂಘಟನೆ ದೂರು ನೀಡಿತ್ತು. ಈ ಹಿನ್ನೆಲೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಚೇತನ್ ಅವರನ್ನು ಬಂಧಿಸಿದ್ದಾರೆ.

ಚೇತನ್ ಅವರನ್ನು ಕಳೆದ ವರ್ಷ ನ್ಯಾಯಧೀಶರನ್ನು ನಿಂದಿಸಿ ಟ್ವೀಟ್ ಮಾಡಿದ್ದ ಕಾರಣಕ್ಕೆ ಶೇಷಾದ್ರಿಪುರಂ ಪೊಲೀಸರು ಬಂಧಿಸಿದ್ದರು. ಐಪಿಸಿ ಸೆಕ್ಷನ್ 505 (2), 504 ಅಡಿಯಲ್ಲಿ ಚೇತನ್ ವಿರುದ್ಧ ಪ್ರಕರಣ ದಾಖಲಾಗಿತ್ತು. 14 ದಿನಗಳ ಕಾಲ ನ್ಯಾಯಾಂಗ ಬಂಧನದಲ್ಲಿದ್ದ ನಟ ಷರತ್ತುಬದ್ಧ ಜಾಮೀನು ಪಡೆದಿದ್ದರು.

ವಿವಿಧ ವಿದ್ಯಮಾನಗಳ ಬಗ್ಗೆ ಚೇತನ್ ತಮ್ಮದೇ ಶೈಲಿಯಲ್ಲಿ ಉತ್ತರ ನೀಡುತ್ತಾ ಬಂದಿದ್ದಾರೆ. ತಮ್ಮ ಪೋಸ್ಟ್ ಮೂಲಕ ಸಾಕಷ್ಟು ಬಾರಿ ವಿವಾದಗಳನ್ನು ಸೃಷ್ಟಿಸಿದ್ದಾರೆ.
___

Be the first to comment

Leave a Reply

Your email address will not be published. Required fields are marked *

Translate »
error: Content is protected !!