ಬಿಜೆಪಿ ಸರ್ಕಾರ ತಂದಿದ್ದ, ಗೋಹತ್ಯೆ ವಿರೋಧಿ ಮಸೂದೆ ಮತ್ತು ಮತಾಂತರ ವಿರೋಧಿ ಮಸೂದೆಯನ್ನು ತೆಗೆದುಹಾಕಬೇಕು ಎಂದು ನಟ ಚೇತನ್ ಅಹಿಂಸ ಒತ್ತಾಯಿಸಿದ್ದಾರೆ.
ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ ಎಲ್ಲಾ 5 ಯೋಜನೆಗಳನ್ನು ಜಾರಿಗೊಳಿಸಬೇಕು. ಬಿಜೆಪಿ ಸರ್ಕಾರ ರದ್ದು ಮಾಡಿದ್ದ ಶೇ.4 ಮುಸ್ಲಿಂ ಮೀಸಲಾತಿಯನ್ನು ಮರುಸ್ಥಾಪಿಸಬೇಕು. ಜಾತಿ ಗಣತಿಯನ್ನು ಬಹಿರಂಗಪಡಿಸಬೇಕು ಎಂದು ಅವರು ಕೋರಿದ್ದಾರೆ.
2021 ರಲ್ಲಿ ಬಿಜೆಪಿ ಸರಕಾರ ಗೋಹತ್ಯೆ ಕಾಯ್ದೆಯನ್ನು ಜಾರಿಗೆ ತಂದಿತ್ತು. ಆಗ ಚೇತನ್ ಅಹಿಂಸ ಕಾಯ್ದೆಯನ್ನು ವಿರೋಧಿಸಿದ್ದರು. ಅಲ್ಲದೇ ಮತಾಂತರ ನಿಷೇಧ ಕಾಯ್ದೆ ಬಗ್ಗೆಯೂ ವಿರೋಧ ವ್ಯಕ್ತಪಡಿಸಿದ್ದರು. ಮತಾಂತರ ನಿಷೇಧ ಕಾಯ್ದೆಯು ವ್ಯಕ್ತಿ ಸ್ವಾತಂತ್ರ್ಯದ ಉಲ್ಲಂಘನೆಯಾಗುತ್ತದೆ ಎಂದು ಅವರು ಪ್ರತಿಪಾದಿಸಿದ್ದರು.
ಸಿದ್ದರಾಮಯ್ಯ ಅವರ ಆಡಳಿತದ ಅವಧಿಯಲ್ಲಿ ರಾಜ್ಯದಲ್ಲಿ ಜಾತಿ ಗಣತಿ ಮಾಡಲಾಗಿತ್ತು. ಆದರೆ ಸರಕಾರ ಅದನ್ನು ಬಹಿರಂಗಪಡಿಸಿರಲಿಲ್ಲ. ಆ ಬಳಿಕ ಬಂದ ಬಿಜೆಪಿ ಸರ್ಕಾರ ಕೂಡಾ ಜಾತಿ ಗಣತಿ ಬಹಿರಂಗಪಡಿಸಿರಲಿಲ್ಲ. ಜಾತಿ ಗಣತಿಯನ್ನು ಬಹಿರಂಗಪಡಿಸಬೇಕು ಎಂದು ಹಲವರು ಒತ್ತಾಯಿಸಿದ್ದರು.
——
Be the first to comment