ಚಿಕ್ಕಣ್ಣ ಮದುವೆಗೆ ಮೂಹೂರ್ತ ಫಿಕ್ಸ್

ಸ್ಯಾಂಡಲ್‌ವುಡ್‌ನ ಜನಪ್ರಿಯ ಹಾಸ್ಯ ನಟ ಚಿಕ್ಕಣ್ಣ ವಿವಾಹ ಆಗಸ್ಟ್‌ 29 ಮತ್ತು 30ರಂದು ಮೈಸೂರಿನಲ್ಲಿ ನಡೆಯಲಿದೆ.

ಚಿಕ್ಕಣ್ಣ ಮಂಡ್ಯ ಮೂಲದ ಪಾವನಾ ಜೊತೆ  ಹಸೆಮಣೆ ಏರಲಿದ್ದಾರೆ. ಕಳೆದ ವರ್ಷ ಚಿಕ್ಕಣ್ಣ ಮತ್ತು ಪಾವನಾ ಅವರ ನಿಶ್ಚಿತಾರ್ಥ ನಡೆದಿತ್ತು. ಈಗ ಮದುವೆ  ದಿನಾಂಕ ನಿಗದಿ ಆಗಿದೆ.

ಪಾವನಾ ಮೂಲತಃ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರ ಗ್ರಾಮದವರು. 2025ರಲ್ಲಿ ಚಿಕ್ಕಣ್ಣ ಮತ್ತು ಪಾವನಾ ಅವರ ನಿಶ್ಚಿತಾರ್ಥವನ್ನು ಸರಳವಾಗಿ ನೆರವೇರಿಸಲಾಗಿತ್ತು. ಇಂಜಿನಿಯರಿಂಗ್ ಪದವಿ ಪಡೆದಿರುವ ಪಾವನಾ ಅವರೊಂದಿಗೆ ಚಿಕ್ಕಣ್ಣ ಹೊಸ ಜೀವನ ಆರಂಭಿಸಲಿದ್ದಾರೆ.

ಚಿಕ್ಕಣ್ಣ ಅವರು ಹಲವು ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಹಲವಾರು ಸಿನಿಮಾಗಳಲ್ಲಿ ನಟಿಸಿ ಜನಮನ ಗೆದ್ದಿದ್ದಾರೆ. ಚಿತ್ರರಂಗದ ಸ್ನೇಹಿತರೆಲ್ಲರೂ ಮದುವೆಗೆ ಆಗಮಿಸಲಿದ್ದಾರೆ.

ಹಲವು ದಿನಗಳಿಂದ ಕುತೂಹಲ ಮೂಡಿಸಿದ್ದ ಚಿಕ್ಕಣ್ಣ ಅವರ ವಿವಾಹ ದಿನಾಂಕ ಇದೀಗ ಅಂತಿಮವಾಗಿ ಅಭಿಮಾನಿಗಳಿಗೆ ಗುಡ್‌ನ್ಯೂಸ್ ಸಿಕ್ಕಿದೆ. ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಆದ ಹಾಸ್ಯ ಶೈಲಿ, ವಿಭಿನ್ನ ಬಾಡಿ ಲಾಂಗ್ವೇಜ್‌,  ಪಂಚಿಂಗ್ ಡೈಲಾಗ್‌ಗಳ ಮೂಲಕ ಅಪಾರ ಅಭಿಮಾನಿಗಳನ್ನು ಗಳಿಸಿರುವ ಚಿಕ್ಕಣ್ಣ ವೈಯಕ್ತಿಕ ಜೀವನದ ಹೊಸ ಅಧ್ಯಾಯಕ್ಕೆ ಕಾಲಿಡಲು ಸಜ್ಜಾಗಿದ್ದಾರೆ.

—-

Be the first to comment

Leave a Reply

Your email address will not be published. Required fields are marked *

Translate »
error: Content is protected !!