ಖ್ಯಾತ ಹಾಸ್ಯನಟ ಚಿಕ್ಕಣ್ಣ ಹಸೆಮಣೆ ಏರಲು ಸಜ್ಜಾಗಿದ್ದಾರೆ.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರ ಗ್ರಾಮದ ಯುವತಿ ಪಾವನಾ ಎಂಬುವವರ ಜೊತೆ ಚಿಕ್ಕಣ್ಣ ಮದುವೆ ನಡೆಯಲಿದೆ. ಪಾವನಾ ಉದ್ಯಮಿಯಾಗಿದ್ದಾರೆ. ಮೆಕಾನಿಕಲ್ ಇಂಜಿನಿಯರ್ ಎಂದು ತಮ್ಮ ಬಯೋದಲ್ಲಿ ಪಾವನಾ ಬರೆದುಕೊಂಡಿದ್ದಾರೆ.
ಚಿಕ್ಕಣ್ಣ ಹಾಗೂ ಪಾವನಾ ಅವರ ಮದುವೆ ನಿಶ್ಚಯವಾಗಿದೆ. ನಿಶ್ಚಿತಾರ್ಥ ಹಾಗೂ ಮದುವೆ ದಿನಾಂಕದ ಬಗ್ಗೆ ಅಧಿಕೃತ ಘೋಷಣೆಯಾಗಿಲ್ಲ. ಶೀಘ್ರದಲ್ಲೇ ಈ ಜೋಡಿ ವಿವಾಹ ಬಂಧನಕ್ಕೆ ಒಳಗಾಗಲಿದೆ ಎಂದು ಹೇಳಲಾಗುತ್ತಿದೆ. ಇತ್ತೀಚೆಗೆ ಚಿಕ್ಕಣ್ಣ ಅವರ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಈ ಜೋಡಿ ಒಟ್ಟಾಗಿ ಕಾಣಿಸಿಕೊಂಡು ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿತ್ತು.
ಹುಡುಗಿಯ ಮನೆಯಲ್ಲಿ ಹೂ ಮುಡಿಸುವ ಶಾಸ್ತ್ರ ನೆರವೇರಿದೆ. ಎರಡೂ ಕುಟುಂಬ ಸದಸ್ಯರ ಸಮ್ಮುಖದಲ್ಲಿ ಮದುವೆ ಮಾತುಕತೆ ನಡೆದಿದೆ. ಹೂ ಮುಡಿಸಿ ಮದುವೆ ನಿಶ್ಚಯಿಸಲಾಗಿದೆ. ಈ ಹಿಂದೆ ಸಾಕಷ್ಟು ಬಾರಿ ಸೋಶಿಯಲ್ ಮೀಡಿಯಾದಲ್ಲಿ ಚಿಕ್ಕಣ್ಣ ಮದುವೆ ಬಗ್ಗೆ ಗುಲ್ಲಾಗಿತ್ತು. ಬಳಿಕ ಅದೆಲ್ಲಾ ಸುಳ್ಳು ಎಂದು ಗೊತ್ತಾಗಿತ್ತು. ಕಳೆದ ವರ್ಷ ‘ಉಪಾಧ್ಯಕ್ಷ’ ಚಿತ್ರದ ಮೂಲಕ ಚಿಕ್ಕಣ್ಣ ಹೀರೊ ಆಗಿ ನಟಿಸಿದ್ದರು.





Be the first to comment