ಗೋಲ್ಡನ್ ಸ್ಟಾರ್ ನಟ ಗಣೇಶ್ ನಟನೆಯ ‘ಕೃಷ್ಣಂ ಪ್ರಣಯ ಸಖಿ’ ಸಿನಿಮಾದ ಇತ್ತೀಚೆಗಷ್ಟೇ ಬಿಡುಗಡೆಗೊಂಡ ‘ಚಿನ್ನಮ್ಮ’ ಹಾಡು ಟ್ರೆಂಡಿಂಗ್‌ನಲ್ಲಿದೆ.
‘ಆಲ್ ಇಂಡಿಯಾ ‘ಯೂಟ್ಯೂಬ್ ಟ್ರೆಂಡಿಂಗ್’ ಪಟ್ಟಿಯಲ್ಲಿ ‘ಚಿನ್ನಮ್ಮ’ ಹಾಡು ಬಿಡುಗಡೆಯಾದ ನಾಲ್ಕು ದಿನಗಳಲ್ಲಿ 70 ಲಕ್ಷಕ್ಕೂ ಅಧಿಕ ವೀಕ್ಷಣೆಗೊಂಡು ಮೂರನೇ ಸ್ಥಾನದಲ್ಲಿದೆ’ ಎಂದು ಚಿತ್ರತಂಡ ತಿಳಿಸಿದೆ.
ಕವಿರಾಜ್ ಅವರು ಬರೆದು ಅರ್ಜುನ್ ಜನ್ಯ ಸಂಗೀತ ನೀಡಿರುವ ‘ಚಿನ್ನಮ್ಮ’ ಹಾಡನ್ನು ಖ್ಯಾತ ಗಾಯಕ ಕೈಲಾಶ್ ಖೇರ್ ಹಾಗೂ ಇಂದು ನಾಗರಾಜ್ ಹಾಡಿದ್ದಾರೆ.
ತ್ರಿಶೂಲ್ ಎಂಟರ್‌ಟೈನ್ಮೆಂಟ್ ಲಾಂಛನದಲ್ಲಿ ಪ್ರಶಾಂತ್ ಜಿ. ರುದ್ರಪ್ಪ ಈ ಸಿನಿಮಾ ನಿರ್ಮಿಸಿದ್ದು, ಶ್ರೀನಿವಾಸರಾಜು ಆಕ್ಷನ್ ಕಟ್ ಹೇಳಿದ್ದಾರೆ. ಗಣೇಶ್ ಅವರಿಗೆ ನಾಯಕಿಯಾಗಿ ಮಾಳವಿಕ ನಾಯರ್ ನಟಿಸಿದ್ದಾರೆ. ಈ ಚಿತ್ರದ ಪ್ರಮುಖಪಾತ್ರದಲ್ಲಿ ಶಶಿಕುಮಾರ್ ಅಭಿನಯಿಸಿದ್ದಾರೆ.
ಶರಣ್ಯ ಶೆಟ್ಟಿ, ಶ್ರೀನಿವಾಸಮೂರ್ತಿ, ಸಾಧು ಕೋಕಿಲ, ರಂಗಾಯಣ ರಘು, ಶ್ರುತಿ, ಭಾವನ, ಅಶೋಕ್, ರಾಮಕೃಷ್ಣ, ಶಿವಧ್ವಜ್, ರಘುರಾಮ್, ಮಾನಸಿ ಸುಧೀರ್, ಅಂಬುಜಾ, ಗಿರಿ ಶಿವಣ್ಣ ಮುಂತಾದವರು ತಾರಾಬಳಗದಲ್ಲಿದ್ದಾರೆ.
‘ಕೃಷ್ಣಂ ಪ್ರಣಯ ಸಖಿ’ ಸಿನಿಮಾ ಆಗಸ್ಟ್ 15ರಂದು ಬಿಡುಗಡೆಯಾಗುತ್ತಿದೆ.
——–

Be the first to comment