ಚಂದ್ರಶೇಖರ್ ಬಂಡಿಯಪ್ಪ ನಿರ್ದೇಶಿಸುತ್ತಿರುವ ‘ಚೌಕಿದಾರ್’ ಸಿನಿಮಾದಲ್ಲಿ ಧನ್ಯಾ ರಾಮ್ ಕುಮಾರ್ ಹೀರೋಯಿನ್ ಆಗಿ ಬಣ್ಣ ಹಚ್ಚುತ್ತಿದ್ದಾರೆ.
‘ನಿನ್ನ ಸನಿಹಕೆ’ ಸಿನಿಮಾ ಮೂಲಕ ಸ್ಯಾಂಡಲ್ವುಡ್ಗೆ ಬಂದ ಧನ್ಯಾ ಇತ್ತೀಚೆಗಷ್ಟೇ ‘ದಿ ಜಡ್ಜ್ ಮೆಂಟ್’ ಸಿನಿಮಾ ಮೂಲಕ ಪ್ರೇಕ್ಷಕರನ್ನು ರಂಜಿಸಿದ್ದಾರೆ. ‘ಕಾಲಪತ್ತರ್’ ಬಿಡುಗಡೆಗೆ ಎದುರು ನೋಡುತ್ತಿರುವ ದೊಡ್ಮನೆ ಸುಂದರಿ ‘ಚೌಕಿದಾರ್’ ಬಳಗ ಸೇರಿಕೊಂಡಿದ್ದಾರೆ. ಚೌಕಿದಾರ್ ಮೂಲಕ ಮೊದಲ ಬಾರಿಗೆ ಧನ್ಯ ಮತ್ತು ಪೃಥ್ವಿ ಅಂಬಾರ್ ತೆರೆ ಹಂಚಿಕೊಳ್ಳುತ್ತಿದ್ದಾರೆ.
ಈವರೆಗೆ ಸಿನಿಮಾದಲ್ಲಿ ಲವರ್ ಬಾಯ್ನಂತೆ ಕಾಣಿಸಿಕೊಂಡಿರುವ ಪೃಥ್ವಿ ಅಂಬಾರ್ ಈ ಚಿತ್ರದಲ್ಲಿ ಆಯಕ್ಷನ್ ಸೀಕ್ವೆನ್ಸ್ ಮೂಲಕ ಪ್ರೇಕ್ಷಕರನ್ನು ರಂಜಿಸಲಿದ್ದಾರೆ. ಆಕ್ಷನ್-ಪ್ಯಾಕ್ಡ್ ಫ್ಯಾಮಿಲಿ ಎಂಟರ್ಟೈನರ್ ಆಗಿ ಬಿಂಬಿತವಾಗಿರುವ ಈ ಚಿತ್ರದಲ್ಲಿ ಹಿರಿಯ ನಟ ಸಾಯಿಕುಮಾರ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ‘ಚೌಕಿದಾರ್’ ಬಹುಭಾಷೆಯಲ್ಲಿ ಮೂಡಿ ಬರಲಿದೆ.
ದ್ಯಾ ಶೇಖರ್ ಎಂಟರ್ಟೈನ್ಮೆಂಟ್ ಬ್ಯಾನರ್ ಅಡಿ ಡಾ. ಕಲ್ಲಹಳ್ಳಿ ಚಂದ್ರಶೇಖರ್ ‘ಚೌಕಿದಾರ್’ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ವಿ. ನಾಗೇಂದ್ರ ಪ್ರಸಾದ್, ಪ್ರಮೋದ್ ಮರವಂತೆ ಹಾಡುಗಳಿಗೆ ಸಾಹಿತ್ಯ, ಸಚಿನ್ ಬಸ್ರೂರು ಚಿತ್ರಕ್ಕೆ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ.
——

Be the first to comment