ʻಛೂ ಮಂತರ್ʼ ರಿಲೀಸ್‌ ಡೇಟ್‌ ಫಿಕ್ಸ್‌

ಶರಣ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ “ಛೂ‌ ಮಂತರ್” ಚಿತ್ರ ಏಪ್ರಿಲ್ 5 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

ಈಗಾಗಲೇ ಟೀಸರ್ ಮೂಲಕ ಮನೆಮಾತಾಗಿರುವ “ಛೂ ಮಂತರ್” ಚಿತ್ರದ ಟ್ರೇಲರ್ ಸಹ ಸದ್ಯದಲ್ಲೇ ಬಿಡುಗಡೆಯಾಗಲಿದೆ.

ತರುಣ್ ಸ್ಟುಡಿಯೋಸ್ ಲಾಂಛನದಲ್ಲಿ ಮಾನಸ ತರುಣ್ ಹಾಗೂ ತರುಣ್ ಶಿವಪ್ಪ ನಿರ್ಮಿಸಿರುವ, “ಕರ್ವ” ಖ್ಯಾತಿಯ ನವನೀತ್ ನಿರ್ದೇಶಿಸಿರುವ “ಛೂ‌ ಮಂತರ್” ಹಾರರ್ ಚಿತ್ರವಾಗಿದೆ. ಈ ಹಿಂದೆ ಬಂದಿರುವ ಹಾರಾರ್ ಚಿತ್ರಗಳಿಗಿಂತ ಸ್ವಲ್ಪ ವಿಭಿನ್ನವಾಗಿದೆ. ಶರಣ್ ಅವರ ಪಾತ್ರ ಈ ಹಿಂದಿನ ಚಿತ್ರಗಳಿಗಿಂತ ಬೇರೆ ರೀತಿಯಲ್ಲಿದೆ.

“ಉಪಾಧ್ಯಕ್ಷ”ನಾಗಿ ಯಶಸ್ಸು ಕಂಡಿರುವ ಚಿಕ್ಕಣ್ಣ ಈ ಚಿತ್ರದ ಪ್ರಮುಖ ಪಾತ್ರದಲ್ಲಿದ್ದಾರೆ. ” ಅಧ್ಯಕ್ಷ” ಹಾಗೂ “ಉಪಾಧ್ಯಕ್ಷ”ರ ಸಮ್ಮಿಲನ ಈ ಚಿತ್ರದಲ್ಲಾಗಿದೆ. ಮೇಘನಾ ಗಾಂವ್ಕರ್, ಅದಿತಿ ಪ್ರಭುದೇವ, ಪ್ರಭು ಮುಂಡ್ಕರ್ ಮುಖ್ಯಭೂಮಿಕೆಯಲ್ಲಿದ್ದಾರೆ.

——

Be the first to comment

Leave a Reply

Your email address will not be published. Required fields are marked *

Translate »
error: Content is protected !!