ದುನಿಯಾ ವಿಜಯ್ ನಿರ್ದೇಶನದ ‘ಸಿಟಿ ಲೈಟ್ಸ್’ ಸಿನಿಮಾದ ಟ್ರೇಲರ್ ಬಿಡುಗಡೆ ಆಗಿದೆ.
ವಿಜಯ್ ಪುತ್ರಿ ಮೋನಿಷಾ ಹಾಗೂ ವಿನಯ್ ರಾಜಕುಮಾರ್ ಪ್ರಮುಖ ಪಾತ್ರದಲ್ಲಿ ನಟಿಸಿರುವ ‘ಸಿಟಿ ಲೈಟ್ಸ್’ ಚಿತ್ರದ ಟ್ರೇಲರ್ ನ್ನು ಶಿವರಾಜಕುಮಾರ್ ಬಿಡುಗಡೆ ಮಾಡಿ ಶುಭ ಹಾರೈಸಿದರು.
ವಿನಯ್ ರಾಜಕುಮಾರ್ ಸಿಕ್ಕಾಪಟ್ಟೆ ಮಾಸ್ ಆಗಿ ಕಾಣಿಸಿಕೊಂಡಿದ್ದಾರೆ. ಮೊದಲ ಬಾರಿಗೆ ಲಾಂಗ್ ಹಿಡಿದು ಅಬ್ಬರಿಸಿದ್ದಾರೆ. ಸಿನಿಮಾದ ಪ್ರಮುಖ ಪಾತ್ರದಲ್ಲಿ ಹಿರಿಯ ನಟಿ ಉಮಾಶ್ರಿ ನಟಿಸಿದ್ದಾರೆ. ಸಂಭಾಷಣೆಕಾರ ಮಾಸ್ತಿ ಉಪ್ಪಾರಳ್ಳಿ ನಟಿಸಿರುವುದು ವಿಶೇಷ.
‘ಸಿಟಿ ಲೈಟ್ಸ್’ ಸಿನಿಮಾ ಸೆಪ್ಟೆಂಬರ್ 18ಕ್ಕೆ ಬಿಡುಗಡೆ ಆಗಲಿದೆ. ಚಿತ್ರಕ್ಕೆ ಚರಣ್ ರಾಜ್ ಸಂಗೀತ ಮತ್ತು ಶಿವಸೇನ ಛಾಯಗ್ರಹಣವಿದೆ.
——





Be the first to comment