‘ಕಾಂತಾರ: ಚಾಪ್ಟರ್ 1’ ಚಿತ್ರದ ಶೂಟಿಂಗ್ ವೇಳೆ ಅರಣ್ಯ ನಿಯಮ ಉಲ್ಲಂಘನೆ ಮಾಡಿದ ಪ್ರಕರಣದಲ್ಲಿ ಚಿತ್ರತಂಡಕ್ಕೆ ಕ್ಲೀನ್ ಚಿಟ್ ಸಿಕ್ಕಿದೆ.
ಸಿನಿಮಾ ಚಿತ್ರೀಕರಣದ ವೇಳೆ ಬ್ಲಾಸ್ಟ್ ಮಾಡಲಾಗಿದೆ. ಮರ ಕಡಿಯಲಾಗಿದೆ.ಇದರಿಂದ ಕಾಡು ಪ್ರಾಣಿಗಳು ಗ್ರಾಮಗಳತ್ತ ನುಗ್ಗಿ ಬರುತ್ತಿವೆ. ಸ್ಥಳೀಯರಿಗೆ ಸಮಸ್ಯೆ ಆಗುತ್ತಿದೆ ಎಂದು ಕೆಲವರು ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ತನಿಖೆ ನಡೆಸಿದ ಅರಣ್ಯಾಧಿಕಾರಿಗಳ ತಂಡ ಯಾವುದೇ ನಿಯಮ ಉಲ್ಲಂಘನೆ ಮಾಡಿಲ್ಲ ಎಂದು ಕ್ಲೀನ್ ಚಿಟ್ ನೀಡಿದೆ.
ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಈ ಬಗ್ಗೆ ತನಿಖೆ ನಡೆಸಿ 24 ಗಂಟೆಯೊಳಗೆ ವರದಿ ನೀಡಿ ಎಂದು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಸ್ಥಳ ಪರಿಶೀಲನೆ ನಡೆಸಿದ್ದ ಸಕಲೇಶಪುರ ಎಸಿಎಫ್ ಮಧು ಹಾಗು ಯಸಳೂರು ವಿಭಾಗದ ಆರ್ಎಫ್ಓ ಕೃಷ್ಣ ನೇತೃತ್ವದ ತಂಡ ಚಲನಚಿತ್ರದ ಶೂಟಿಂಗ್ ಸ್ಥಳಕ್ಕೆ ಭೇಟಿ ನೀಡಿ ಮಹಜರ್ ನಡೆಸಿ ವರದಿ ನೀಡಿದೆ. ‘ಯಾವುದೇ ನಿಯಮ ಉಲ್ಲಂಘನೆ ಆಗಿಲ್ಲ’ ಎಂದು ವರದಿ ನೀಡಿದ್ದರು.
ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಹೇರೂರು ಗ್ರಾಮದ ಸಮೀಪ ಇರುವ ಗವಿಗುಡ್ಡ ಪ್ರದೇಶದ ಡೀಮ್ಡ್ ಅರಣ್ಯ ಹಾಗು ಗೋಮಾಳ ಜಮೀನಿನಲ್ಲಿ ಚಿತ್ರೀಕರಣ ಮಾಡಲು ಕಾಂತಾರ ತಂಡ ಅನುಮತಿ ಪಡೆದುಕೊಂಡಿತ್ತು.
ಚಿತ್ರತಂಡ ಷರತ್ತುಗಳನ್ನು ಉಲ್ಲಂಘಿಸಿ ವನ್ಯಜೀವಿಗಳಿಗೆ ಅಥವಾ ಸಸ್ಯಸಂಕುಲಕ್ಕೆ ಹಾನಿ ಮಾಡಿದರೆ ಚಿತ್ರೀಕರಣ ಸ್ಥಗಿತಗೊಳಿಸಲು ಕ್ರಮ ವಹಿಸುವಂತೆ ಅರಣ್ಯ ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆ ನಿರ್ದೇಶಕರಿಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಸೂಚನೆ ನೀಡಿದ್ದರು. ಚಿತ್ರತಂಡಕ್ಕೆ ಜ.15 ರಿಂದ ಜ.25 ರ ವರೆಗೆ ಶೂಟಿಂಗ್‌ಗೆ ಅವಕಾಶ ನೀಡಲಾಗಿದೆ.
Be the first to comment