ರಿಯಾ ಚಕ್ರವರ್ತಿಗೆ ಕ್ಲೀನ್ ಚಿಟ್

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣದಲ್ಲಿ ನಟಿ ರಿಯಾ ಚಕ್ರವರ್ತಿಗೆ ಸಿಬಿಐ ಕ್ಲೀನ್‌ಚಿಟ್ ನೀಡಿ ಬಿಗ್‌ ರಿಲೀಫ್‌ ನೀಡಿದೆ.

ಪಾಟ್ನಾದ ಕೋರ್ಟ್‌ಗೆ ಸಲ್ಲಿಸಿದ್ದ ಸಿಬಿಐ ಕ್ಲೋಸರ್ ರಿಪೋರ್ಟ್ ಪ್ರಕಾರ, ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆಗೆ ಪ್ರಚೋದಿಸುವಂತದ್ದು ಏನೂ ನಡೆದಿಲ್ಲ. ಸುಶಾಂತ್ ಸಿಂಗ್ ಆತ್ಮಹತ್ಯೆಗೂ 6 ದಿನಗಳ ಮೊದಲೇ ರಿಯಾ ಚಕ್ರವರ್ತಿ ಹಾಗೂ ಅವರ ಸಹೋದರ ಶೋವಿಕ್ ಚಕ್ರವರ್ತಿ, ಸುಶಾಂತ್ ಸಿಂಗ್ ಫ್ಲ್ಯಾಟ್‌ನಿಂದ ಹೊರಟಿದ್ದರು. ಅದಾದ ಬಳಿಕ ಅವರ‍್ಯಾರು ಸುಶಾಂತ್‌ನ್ನು ಭೇಟಿಯಾಗಿಲ್ಲ ಎಂದು ಸಿಬಿಐ ವರದಿಯಲ್ಲಿ ತಿಳಿಸಿದೆ.

ರಿಯಾ ಚಕ್ರವರ್ತಿ ಅವರು ಸುಶಾಂತ್ ಸಿಂಗ್ ರಜಪೂತ್ ಅವರಿಗೆ ಕೊಲೆ ಬೆದರಿಕೆ ಹಾಕಿದ್ದಾರೆ ಎಂಬ ಆರೋಪಗಳನ್ನು ಸಿಬಿಐ ತಳ್ಳಿ ಹಾಕಿದೆ.  ರಿಯಾ ಚಕ್ರವರ್ತಿ ಅವರು ಸುಶಾಂತ್ ಸಿಂಗ್ ರಜಪೂತ್ ಅವರ ಕೆಲವು ವಸ್ತುಗಳನ್ನು ತೆಗೆದುಕೊಂಡಿದ್ದಾರೆ ಎಂದು ಆರೋಪ ಕೇಳಿ ಬಂದಿತ್ತು.  ಸುಶಾಂತ್ ಅವರು ಉಡುಗೊರೆಯಾಗಿ ನೀಡಿದ್ದ ಆಪಲ್ ಲ್ಯಾಪ್‌ಟಾಪ್ ಮತ್ತು ವಾಚ್‌ನ್ನು ಮಾತ್ರ  ರಿಯಾ ತೆಗೆದುಕೊಂಡಿದ್ದಾರೆ ಎಂದು ವರದಿ ತಿಳಿಸಿದೆ.

2020ರಲ್ಲಿ ಸುಶಾಂತ್ ಸಿಂಗ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಅವರ ತಂದೆ ಕೆ.ಕೆ. ಸಿಂಗ್ ಈ ಪ್ರಕರಣದಲ್ಲಿ ರಿಯಾ ವಿರುದ್ಧ ಹಲವಾರು ಆರೋಪಗಳನ್ನು ಮಾಡಿದ್ದರು.  ಸುಶಾಂತ್ ಕುಟುಂಬಸ್ಥರು ಸಿಬಿಐ ಕ್ಲೋಸರ್ ರಿಪೋರ್ಟ್‌ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!