‘ತ್ರಿಷಾ ಮನೆಯಲ್ಲಿ ಇರೋದು ಉತ್ತಮ ‘

ದಳಪತಿ ವಿಜಯ್ ಹಾಗೂ ನಟಿ ತ್ರಿಷಾ ಅವರ ಸಂಬಂಧದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆ ನಡೆಯುತ್ತಿದ್ದು,ತಮಿಳು ನಟ ಹಾಗೂ ನಿರ್ದೇಶಕ ಪಾರ್ಥಿಬನ್ ತ್ರಿಷಾ ಅವರನ್ನು ಟೀಕಿಸಿ ಸುದ್ದಿ ಆಗಿದ್ದಾರೆ.

“ಕುಂದವೈ (ತ್ರಿಷಾ) ಕೆಲ ದಿನ ಮನೆ ಒಳಗೆ ಇರುವುದು ಉತ್ತಮ. ಎಲ್ಲವನ್ನೂ ಮುಕ್ತವಾಗಿ ಮಾತನಾಡಲು ಸಾಧ್ಯವಿಲ್ಲ. ಎಲ್ಲಾ ಕವಿತೆಗಳನ್ನು ಆನಂದಿಸಲು ಸಾಧ್ಯವಿಲ್ಲ. ಕೆಲವು ಕವಿತೆಗಳನ್ನು ಮುಕ್ತವಾಗಿ ಓದಲು ಸಾಧ್ಯವಿಲ್ಲ” ಎಂದು ಅವರು ಹೇಳಿದ್ದಾರೆ.

“ಕುಂದವೈ ಹೊರಗೆ ಬಂದರೆ ಸಮಸ್ಯೆ” ಎಂಬ ಅವರ ಮಾತುಗಳು ಈಗ ಭಾರೀ ಚರ್ಚೆಗೆ ಕಾರಣವಾಗಿ ಟೀಕೆ ಎದುರಿಸುತ್ತಿದೆ.

ಪಾರ್ಥಿಬನ್ ಹೇಳಿಕೆಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕೆಲವರು ಅವರ ಮಾತನ್ನು ಬೆಂಬಲಿಸುತ್ತಿದ್ದರೆ, ಇನ್ನೂ ಕೆಲವರು ಈ ರೀತಿಯ ಹೇಳಿಕೆ ಸರಿಯಲ್ಲ ಎಂದು ಹೇಳಿದ್ದಾರೆ.

ಪಾರ್ಥಿಬನ್ ಅವರನ್ನು ನೇರವಾಗಿ ಹೆಸರಿಸದೆ ತ್ರಿಷಾ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. “ಮೂರ್ಖತನ” ಎಂದ ಸಮಾರಂಭದಲ್ಲಿ ತನ್ನ ಬಗ್ಗೆ ಮಾಡಿದ ಟೀಕೆಗಳನ್ನು ಖಂಡಿಸಿದ್ದಾರೆ.

—-

Be the first to comment

Leave a Reply

Your email address will not be published. Required fields are marked *

Translate »
error: Content is protected !!