ಚಿತ್ರೀಕರಣ ವೇಳೆ ರೋಗಿಗಳಿಗೆ ತೊಂದರೆಯಾಗಿದೆ ಎಂಬ ವರದಿಗಳು ಬಂದ ಹಿನ್ನೆಲೆಯಲ್ಲಿ ಮಲಯಾಳಂ ಸ್ಟಾರ್ ಫಹಾದ್ ಫಾಸಿಲ್ ವಿರುದ್ಧ ದೂರು ದಾಖಲಾಗಿದೆ.
ಫಹಾದ್ ನಿರ್ಮಾಣದ ‘ಪೇಯ್ನ್‌ಕಿಲಿ’ ಚಿತ್ರದ ಚಿತ್ರೀಕರಣ ಕೇರಳದ ಆಸ್ಪತ್ರೆಯಲ್ಲಿ ನಡೆದಿತ್ತು. ಆದರೆ ಚಿತ್ರತಂಡ ಅಲ್ಲಿದ್ದವರಿಗೆ ತೊಂದರೆ ಕೊಟ್ಟ ಕಾರಣ ಮಾನವ ಹಕ್ಕುಗಳ ಆಯೋಗ ಫಹಾದ್ ವಿರುದ್ಧ ದೂರು ದಾಖಲಿಸಿಕೊಂಡಿದೆ.
ಎರ್ನಾಕುಲಂನ ಅಂಗಮಾಲಿ ತಾಲೂಕು ಆಸ್ಪತ್ರೆಯ ತುರ್ತು ವಿಭಾಗದಲ್ಲಿ ಪೇಯ್ನ್‌ಕಿಲಿ’ ಸಿನಿಮಾ ಚಿತ್ರೀಕರಣ ನಡೆಯುತ್ತಿತ್ತು. ಆಗ ರೋಗಿಗಳಿಗೆ ತೊಂದರೆಯಾಗಿದೆ ಎಂಬ ವರದಿಗಳು ಬಂದ ಹಿನ್ನೆಲೆಯಲ್ಲಿ ವರದಿಗಳ ಆಧಾರದ ಮೇಲೆ ಸ್ವಯಂ ಪ್ರಕರಣವನ್ನು ದಾಖಲಿಸಿಕೊಂಡ ಆಯೋಗದ ಸದಸ್ಯೆ ವಿ ಕೆ ಬೀನಾಕುಮಾರಿ, ಏಳು ದಿನಗಳಲ್ಲಿ ವಿವರಣೆ ವರದಿಯನ್ನು ಸಲ್ಲಿಸುವಂತೆ ಎರ್ನಾಕುಲಂ ಜಿಲ್ಲಾ ವೈದ್ಯಾಧಿಕಾರಿ ಮತ್ತು ಅಂಗಮಾಲಿ ತಾಲೂಕು ಆಸ್ಪತ್ರೆ ಅಧೀಕ್ಷಕರಿಗೆ ಸೂಚಿಸಿದ್ದಾರೆ.
ಚಿತ್ರೀಕರಣದ ವೇಳೆ ನಟರು ಸೇರಿದಂತೆ ಸುಮಾರು 50 ಮಂದಿ ಹಾಜರಿದ್ದು, ತುರ್ತು ಚಿಕಿತ್ಸಾ ಕೊಠಡಿಯನ್ನೂ ನಿರ್ಲಕ್ಷಿಸಿ ಶೂಟಿಂಗ್ ಹೆಸರಲ್ಲಿ ಚಿತ್ರತಂಡ ಗಲಾಟೆ ಮಾಡಿದೆ. ದೊಡ್ಡ ದೊಡ್ಡ ಲೈಟ್‌ಗಳನ್ನು ಹಾಕಿದ್ದಾರೆ. ತುರ್ತು ಚಿಕಿತ್ಸಾ ಕೊಠಡಿಯಲ್ಲಿ ಕೆಲವು ನಿರ್ಬಂಧಗಳನ್ನು ಹಾಕಿ ಅಲ್ಲಿನ ಸಿಬ್ಬಂದಿ ಹಾಗೂ ರೋಗಿಗಳಿಗೆ ತೊಂದರೆ ಕೊಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ವೈದ್ಯರು ಚಿಕಿತ್ಸೆ ಮುಂದುವರಿಸಿರುವಾಗಲೇ ಚಿತ್ರದ ಶೂಟಿಂಗ್ ನಡೆದಿದೆ ಎಂದು ತಿಳಿದು ಬಂದಿದೆ.
Be the first to comment