ಪ್ರಭಾಸ್ ವಿರುದ್ಧ ಪ್ರಕರಣ

ರಾಮಾಯಣ ಆಧರಿಸಿದ ಸಿನಿಮಾ ಮಾಡಲು ಹೊರಟ ಆದಿಪುರುಷ್ ಚಿತ್ರತಂಡಕ್ಕೆ ಸಂಕಷ್ಟ ಎದುರಾಗಿದೆ.

ಉತ್ತರ ಪ್ರದೇಶದ ವ್ಯಕ್ತಿಯೊಬ್ಬರು ಆದಿಪುರುಷ್ ಸಿನಿಮಾದಲ್ಲಿ ರಾಮಾಯಣದ ಪಾತ್ರಗಳನ್ನು ತಪ್ಪಾಗಿ ತೋರಿಸಲಾಗಿದೆ ಎಂದು ದೂರು ದಾಖಲಿಸಿದ್ದಾರೆ.

ನಾಯಕ ಪ್ರಭಾಸ್, ರಾವಣ ಪಾತ್ರಧಾರಿ ಸೈಫ್ ಅಲಿ ಖಾನ್, ನಿರ್ದೇಶಕ ಓಂ ರಾವತ್ ಸೇರಿದಂತೆ ಐವರ ವಿರುದ್ಧ ಪ್ರಕರಣ ದಾಖಲಾಗಿದೆ.

ಧಾರ್ಮಿಕ ಕತೆಗಳಿಗೆ ಸಂಬಂಧಿಸಿದ ಸಿನಿಮಾ ಮಾಡುವಾಗ ಎಚ್ಚರಿಕೆ ವಹಿಸಬೇಕಾಗುತ್ತದೆ. ಆದರೆ ಇತ್ತೀಚೆಗೆ ಬಿಡುಗಡೆಯಾಗಿದ್ದ ಆದಿಪುರುಷ್ ಸಿನಿಮಾದ ಟೀಸರ್ ನಲ್ಲಿ ರಾಮ, ರಾವಣರ ಪಾತ್ರವನ್ನು ತೋರಿಸಿದ ರೀತಿ ನಗೆಪಾಟಲಿಗೀಡಾಗಿತ್ತು.

ಕಳಪೆ ಮಟ್ಟದ ವಿಎಫ್‌ಎಕ್ಸ್‌ನಿಂದಾಗಿ ವಿಪರೀತ ಟ್ರೋಲ್ ಆಗಿರುವ ಜೊತೆಗೆ ಚಿತ್ರದಲ್ಲಿ ರಾಮಾಯಣದ ಪಾತ್ರಗಳನ್ನು ತಮಗೆ ತೋಚಿದಂತೆ ಪ್ರೆಸೆಂಟ್ ಮಾಡಿರುವುದು ಹಲವರ ಆಕ್ರೋಶಕ್ಕೆ ಕಾರಣವಾಗಿದೆ.

ಹಿಂದು ಸಂಘಟನೆಗಳು ‘ಆದಿಪುರುಷ್’ ಟೀಸರ್‌ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿವೆ. ಮಧ್ಯ ಪ್ರದೇಶ ಗೃಹ ಸಚಿವ ನರೋತ್ತಮ್ ಮಿಶ್ರಾ ‘ಆದಿಪುರುಷ್’ ಟೀಸರ್ ಬಗ್ಗೆ ಚಿತ್ರತಂಡಕ್ಕೆ ಎಚ್ಚರಿಕೆ ನೀಡಿದ್ದಾರೆ.

‘ಆದಿಪುರುಷ್’ ಸಿನಿಮಾದ ಟೀಸರ್‌ನಲ್ಲಿ ಹನುಮಂತನ ಪಾತ್ರಧಾರಿಗೆ ಲೆದರ್‌ ಬಟ್ಟೆಗಳನ್ನು ತೊಡಿಸಲಾಗಿದೆ. ಹನುಮನ ಸೈನ್ಯಕ್ಕೂ ಲೆದರ್ ಬಟ್ಟೆಗಳನ್ನು ತೊಡಿಸಲಾಗಿದೆ. ಇದು ಹನುಮಂತ ದೇವರಿಗೆ ಮಾಡಿದ ಅಪಮಾನ. ಹಿಂದೂ ಧರ್ಮಕ್ಕೆ ಮಾಡಿದ ಅಪಮಾನ ಎಂದು ಮಧ್ಯ ಪ್ರದೇಶ ಗೃಹ ಸಚಿವ ನರೋತ್ತಮ್ ಮಿಶ್ರಾ ದೂರಿದ್ದಾರೆ.

”ಈ ಬಗ್ಗೆ ನಿರ್ಮಾಪಕ ಹಾಗೂ ನಿರ್ದೇಶಕರಿಗೆ ಪತ್ರ ಬರೆಯುತ್ತೇನೆ. ಆ ದೃಶ್ಯಗಳನ್ನು ತೆಗೆದು ಹಾಕುವಂತೆ ಮನವಿ ಮಾಡುತ್ತೇನೆ. ಅವರು ಆ ದೃಶ್ಯಗಳನ್ನು ತೆಗೆದು ಹಾಕದಿದ್ದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು” ಎಂದು ಸಚಿವರು ಈ ಹಿಂದೆಯೇ ಎಚ್ಚರಿಕೆ ನೀಡಿದ್ದರು.
___

Be the first to comment

Leave a Reply

Your email address will not be published. Required fields are marked *

Translate »
error: Content is protected !!