ಸೋನು ನಿಗಮ್ ವಿರುದ್ಧ ದೂರು​

ಬೆಂಗಳೂರಿನ ಸಂಗೀತ ಕಾರ್ಯಕ್ರಮದಲ್ಲಿ ಆಕ್ಷೇಪಾರ್ಹ  ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿರುವ ಆರೋಪದ ಮೇಲೆ ಖ್ಯಾತ ಗಾಯಕ ಸೋನು ನಿಗಮ್ ವಿರುದ್ಧ ಬೆಂಗಳೂರಿನಲ್ಲಿ ದೂರು​ ದಾಖಲಾಗಿದೆ.

ಸೋನು ನಿಗಂ ಅವರ   ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿರುವ ಕನ್ನಡಪರ ಸಂಘಟನೆಗಳು  ದೂರು ದಾಖಲಿಸಿವೆ. ಕನ್ನಡ ಚಿತ್ರರಂಗ ಸೋನು ನಿಗಂ ಅವರನ್ನು ನಿಷೇಧಿಸಬೇಕೆಂದು  ಒತ್ತಾಯಿಸಲಾಗಿದೆ.

ಕರ್ನಾಟಕ ರಕ್ಷಣಾ ವೇದಿಕೆಯ ಬೆಂಗಳೂರು ನಗರ ಜಿಲ್ಲಾ ಘಟಕದ ಅಧ್ಯಕ್ಷ ಧರ್ಮರಾಜ್ ಎ. ಅವರು  ದೂರು ಸಲ್ಲಿಸಿದ್ದಾರೆ.  ಕನ್ನಡಿಗರ ಕನ್ನಡ ಪ್ರೇಮವನ್ನು ಭಯೋತ್ಪಾದಕತೆಗೆ ಹೋಲಿಸಿದ ಸೋನು ನಿಗಂ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ.

ಕರವೇ ಅಧ್ಯಕ್ಷ ನಾರಾಯಣಗೌಡ ಅವರು ‘ಸೋನು ನಿಗಂ ಒಬ್ಬ ಸಾಂಸ್ಕೃತಿಕ ಭಯೋತ್ಪಾದಕ. ಸೋನು ನಿಗಮ್   ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸುತ್ತಾನಾ? ಸೋನು ನಿಗಂ ಈ ಕೂಡಲೇ ಕನ್ನಡಿಗರ ಕ್ಷಮೆ ಕೇಳಬೇಕು. ಇಲ್ಲವಾದರೆ ಸೋನು ನಿಗಮ್ ಕನ್ನಡ ಹಾಡು ಹಾಡುವಂತಿಲ್ಲ. ಸೋನು ನಿಗಂ ಮೇಲೆ ನಿಷೇಧ ಹೇರಬೇಕು ಎಂದು ಕನ್ನಡ‌ ಚಲನಚಿತ್ರ ಮಂಡಳಿ, ನಿರ್ಮಾಪಕ ಸಂಘಕ್ಕೆ ಆಗ್ರಹಿಸುತ್ತೇನೆ’ ಎಂದಿದ್ದಾರೆ.

ಬೆಂಗಳೂರಿನ ಈಸ್ಟ್ ಪಾಯಿಂಟ್ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಟೆಕ್ನಾಲಜಿಯಲ್ಲಿ ಏಪ್ರಿಲ್ 25-26ರಂದು  ಸೋನು ನಿಗಂ  ಗಾಯನಗೋಷ್ಠಿ ಆಯೋಜಿಸಲಾಗಿತ್ತು. ಈ ವೇಳೆ ವಿದ್ಯಾರ್ಥಿಯೊಬ್ಬ ಕನ್ನಡ ಹಾಡು ಹಾಡುವಂತೆ ಒತ್ತಾಯಿಸಿದ್ದ. ಆಗ   ಸೋನು ನಿಗಂ, ‘ಕನ್ನಡ, ಕನ್ನಡ.. ಇದರಿಂದಲೇ ಪಹಲ್ಗಾಮ್ ದಾಳಿ ಆಗಿರುವುದು’ ಎಂದು  ಹೇಳಿದ್ದರು. ಸೋನು ನಿಗಂ ಅವರ ಈ ಹೇಳಿಕೆಗೆ ಕನ್ನಡಿಗರ ಆಕ್ರೋಶ ವ್ಯಕ್ತವಾಗಿದೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!