ವೆಟ್ಟೆಯಾನ್

ರಜನಿಕಾಂತ್ ಸಿನಿಮಾದ ವಿರುದ್ಧ ದೂರು ದಾಖಲು

ಸೂಪರ್ ಸ್ಟಾರ್ ರಜನೀಕಾಂತ್​ ಹೊಸ ಸಿನಿಮಾ ‘ವೆಟ್ಟೆಯಾನ್’ ವಿರುದ್ಧ ದೂರು ದಾಖಲಾಗಿದೆ.

ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ರಜನಿಕಾಂತ್  ಆಸ್ಪತ್ರೆಯಿಂದ ಡಿಸ್​ಚಾರ್ಜ್ ಆಗಿ ಮನೆಗೆ ಮರಳಿದ್ದಾರೆ. ಈ ಬೆನ್ನಲ್ಲೇ ರಜನಿಕಾಂತ್  ಹೊಸ ಸಿನಿಮಾ ‘ವೆಟ್ಟೆಯಾನ್’ ವಿರುದ್ಧ ದೂರು ದಾಖಲಾಗಿದೆ.

‘ವೆಟ್ಟೆಯಾನ್’ ಸಿನಿಮಾದ  ಟ್ರೈಲರ್​ನಲ್ಲಿ ಕೇಳಿ ಬರುವ ಕೆಲ ಸಂಭಾಷಣೆಗಳ ವಿರುದ್ಧ ವಕೀಲ ಪಲನಿವೇಲುಸ್ವಾಮಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲು ಮಾಡಿದ್ದಾರೆ. ಟ್ರೈಲರ್ ನಲ್ಲಿ ಬಳಸಲಾಗಿರುವ ಕೆಲವು ಸಂಭಾಷಣೆಗಳ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಪಲನಿವೇಲುಸ್ವಾಮಿ ಎಂಬುವರು ಹೈಕೋರ್ಟ್​ನ ಮಧುರೈ ಬೆಂಚ್​ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿದ್ದಾರೆ. ಸಿನಿಮಾದ ಟ್ರೈಲರ್​ನಲ್ಲಿ ನಾಯಕ ಎನ್​ಕೌಂಟರ್ ಕುರಿತಾಗಿ ಹೀರೋಯಿಕ್ ಸಂಭಾಷಣೆಗಳನ್ನು ಹೇಳುವ ದೃಶ್ಯಗಳಿವೆ. ಈ ದೃಶ್ಯಗಳು ಹಾಗೂ ಸಂಭಾಷಣೆಗಳ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

‘ವೆಟ್ಟೆಯಾನ್’ ಸಿನಿಮಾದಲ್ಲಿ ಅಕ್ರಮ ಚಟುವಟಿಕೆಯಾದ ಎನ್​ಕೌಂಟರ್​ಗೆ ಒತ್ತು ನೀಡುವ, ಎನ್​ಕೌಂಟರ್​ ನ್ನು ಸರಿಯೆಂದು ವಾದಿಸುವ ಸಂಭಾಷಣೆಗಳಿವೆ. ಇದು ಸಮಾಜಕ್ಕೆ ಮಾರಕವಾಗಿದೆ. ಈ ಸಿನಿಮಾ ಬಿಡುಗಡೆ ಆದರೆ ಜನರ ಮನಸ್ಸಿನಲ್ಲಿ ಎನ್​ಕೌಂಟರ್​ಗಳು ಸರಿಯೆಂಬ ಭಾವನೆ  ಮೂಡಲಿದೆ.  ಈ ಸಿನಿಮಾದಲ್ಲಿರುವ ಎನ್​ಕೌಂಟರ್ ಕುರಿತಾದ ಸಂಭಾಷಣೆಗಳನ್ನು ಮ್ಯೂಟ್ ಮಾಡುವಂತೆ ನಿರ್ಮಾಣ ಸಂಸ್ಥೆಗೆ ಸೂಚಿಸಬೇಕು. ಇಲ್ಲವಾದರೆ ಸಿನಿಮಾದ ಬಿಡುಗಡೆಗೆ ತಾತ್ಕಾಲಿಕ ತಡೆ ನೀಡಬೇಕೆಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ಕೋರಲಾಗಿದೆ.

ಅರ್ಜಿಯ ವಿಚಾರಣೆ ನಡೆಸಿದ ದ್ವಿಸದಸ್ಯ ಪೀಠ, ಸಿಬಿಎಫ್​ಸಿ ಹಾಗೂ ಸಿನಿಮಾ ನಿರ್ಮಾಣ ಮಾಡಿರುವ ಲೈಕಾ ಪ್ರೊಡಕ್ಷನ್ ಹೌಸ್​ಗೆ ನೊಟೀಸ್​ ಜಾರಿ ಮಾಡಿದೆ. ಆದರೆ ಸಿನಿಮಾದ ಬಿಡುಗಡೆ ಮೇಲೆ ತಾತ್ಕಾಲಿಕ ತಡೆ ನೀಡಲು ಪೀಠವು ನಿರಾಕರಿಸಿದೆ.

ಸಿಬಿಎಫ್​ಸಿ ಹಾಗೂ ಲೈಕಾ ಪ್ರೊಡಕ್ಷನ್ ಹೌಸ್​ನ ಪ್ರತಿಕ್ರಿಯೆ ಬಳಿಕ  ಅರ್ಜಿಯ ಮುಂದಿನ ವಿಚಾರಣೆ ನಡೆಯಲಿದೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!