ಫಿಲ್ಮ್​ ಚೇಂಬರ್​ಗೆ ದೂರು ಕೊಟ್ಟ ಸಾಲು ಮರದ ತಿಮ್ಮಕ್ಕ!

ಸಾಲುಮರದ ತಿಮ್ಮಕ್ಕ ಅವರ ಜೀವನ ಕಥೆ ಆಧರಿಸಿ ನಿರ್ಮಾಣವಾಗುತ್ತಿದ್ದ  ‘ವೃಕ್ಷಮಾತೆ’  ಎಂಬ ಸಿನಿಮಾ  ಮಾಡಬಾರದು ಎಂದು ಸ್ವತಃ ತಿಮ್ಮಕ್ಕ ಅವರೇ ಫಿಲ್ಮ್ ಚೇಂಬರ್​ಗೆ  ದೂರು ಕೊಟ್ಟಿದ್ದಾರೆ.

ಎರಡು ದಿನಗಳ ಹಿಂದೆ ಚಿತ್ರತಂಡ ಸಿನಿಮಾದ ಶೂಟಿಂಗ್ ಮಾಡುತ್ತಿತ್ತು. ಈ ವೇಳೆ ತಂಡವನ್ನು ಪೊಲೀಸರು ಸ್ಟೇಷನ್​ಗೆ ಕರೆದುಕೊಂಡು ಹೋಗಿದ್ದರು. ಅಲ್ಲಿ ‘ವೃಕ್ಷಮಾತೆ’ ಸಿನಿಮಾಗೆ ಸಾಲು ಮರದ ತಿಮ್ಮಕ್ಕ ಅವರ ಸಾಕು ಮಗ ಉಮೇಶ್ ಅವರಿಂದ ಅನುಮತಿ ಪಡೆದಿಲ್ಲ ಎಂಬ ಮಾಹಿತಿಯನ್ನು ಪೊಲೀಸರು ನೀಡಿದ್ದರು. ಈಗ ಸಾಲು ಮರದ ತಿಮ್ಮಕ್ಕ ಫಿಲ್ಮ್​ ಚೇಂಬರ್​ಗೆ ಆಗಮಿಸಿ  ದೂರು ಕೊಟ್ಟಿದ್ದಾರೆ.

ಶ್ರೀಲಕ್ಷ್ಮಿ ವೆಂಕಟೇಶ್ವರ ಪಿಕ್ಚರ್ಸ್’ ಬ್ಯಾನರ್ ಅಡಿಯಲ್ಲಿ ‘ವೃಕ್ಷಮಾತೆ’ ಸಿನಿಮಾ ಸಿದ್ಧವಾಗುತ್ತಿದೆ.  ಚಿತ್ರವನ್ನು ದಿಲೀಪ್ ಕುಮಾರ್ ಎಚ್.ಆರ್., ಸೌಜನ್ಯ ಡಿ.ವಿ, ಎ. ಸಂತೋಷ್ ಮುರಳಿ, ಒರಟ ಶ್ರೀ ಅವರು ಈ ಸಿನಿಮಾವನ್ನು ನಿರ್ಮಿಸುತ್ತಿದ್ದಾರೆ.  ಶ್ರೀ ನಿರ್ದೇಶನ ಮಾಡುತ್ತಿದ್ದಾರೆ. ಸಿದ್ದೇಶ್ ಅವರು ಬರೆದಿರುವ ‘ವೃಕ್ಷಮಾತೆ ಸಾಲುಮರದ ತಿಮ್ಮಕ್ಕ’ ಕೃತಿಯನ್ನು ಆಧರಿಸಿ  ಸಿನಿಮಾ ಸಿದ್ಧವಾಗುತ್ತಿದೆ.

ಸಾಲುಮರದ ತಿಮ್ಮಕ್ಕ ಅವರ ಸಾಕು ಮಗ ಉಮೇಶ್,  ‘ಸಾಲುಮರದ ತಿಮ್ಮಕ್ಕ ಅವರ ಬಯೋಪಿಕ್ ಮಾಡೋದಾಗಿ ಸಾಕಷ್ಟು ನಿರ್ದೇಶಕರು ಬಂದಿದ್ದರು.  ನಾವು ಮಾಡೋದು ಬೇಡ ಎಂದು ಹೇಳಿದ್ದೇವೆ. ದಿಲೀಪ್ ಕೂಡ ಸಿನಿಮಾ ಮಾಡುತ್ತೇನೆ ಎಂದಿದ್ದರು. ಅವರಿಗೂ ಬೇಡ ಎಂದು ಹೇಳಿದ್ದೆವು. ಈ ತಂಡಕ್ಕೆ ನಾವು ಸಿನಿಮಾ ಮಾಡೋಕೆ ಬಿಡುವುದಿಲ್ಲ’ ಎಂದು ಹೇಳಿದ್ದಾರೆ.

ಸಿನಿಮಾ ಸಂಬಂಧ ಸಾಲುಮರದ ತಿಮ್ಮಕ್ಕ ದೂರು ಕೊಟ್ಟಿದ್ದಾರೆ.  ಅನುಮತಿ ಇಲ್ಲದೇ ಸಿನಿಮಾ ಮಾಡ್ತಿದಾರೆ ಎಂದು ಹೇಳಿದ್ದಾರೆ. ಇಲ್ಲಿ ವೃಕ್ಷಮಾತೆ ಸಿನಿಮಾ ರಿಜಿಸ್ಟರ್ ಆಗಿಲ್ಲ. ಸಿನಿಮಾ ತಂಡವನ್ನು ಕರೆದು ಮಾತನಾಡುತ್ತೇವೆ ಎಂದು ಫಿಲ್ಮ್ ಚೇಂಬರ್ ಹೇಳಿದೆ.

—-

Be the first to comment

Leave a Reply

Your email address will not be published. Required fields are marked *

Translate »
error: Content is protected !!