ರಾಕಿಂಗ್ ಸ್ಟಾರ್ ಯಶ್ ಅವರ ಬಹುನಿರೀಕ್ಷಿತ ಚಿತ್ರ ಟಾಕ್ಸಿಕ್ ಟೀಸರ್‌ನಲ್ಲಿ ಅಸಭ್ಯ ದೃಶ್ಯಗಳಿವೆ ಎಂದು ವಕೀಲ ಲೋಹಿತ್ ಕುಮಾರ್ ಅವರು ಕೇಂದ್ರ ಸೆನ್ಸಾರ್ ಮಂಡಳಿಗೆ ದೂರು ಸಲ್ಲಿಸಿದ್ದಾರೆ.
ಟೀಸರ್‌ನ ದೃಶ್ಯಗಳನ್ನು ಗಮನಿಸಿದರೆ ಈ ಚಿತ್ರವು ಕುಟುಂಬ ಸದಸ್ಯರೊಂದಿಗೆ ನೋಡಲು ಸೂಕ್ತವಲ್ಲ.ಚಿತ್ರಮಂದಿರಗಳಲ್ಲಿ ಎ ಸರ್ಟಿಫಿಕೇಟ್ ಇದ್ದರೆ ಮಕ್ಕಳನ್ನು ಕರೆದುಕೊಂಡು ಫ್ಯಾಮಿಲಿ ಆಡಿಯನ್ಸ್ ನೋಡಲು ಸಾಧ್ಯವಿಲ್ಲ. ಯೂಟ್ಯೂಬ್‌ನಂತಹ ಸಾಮಾಜಿಕ ಜಾಲತಾಣಗಳಲ್ಲಿ ಟೀಸರ್‌ಗಳಿಗೆ ಯಾವುದೇ ಮಾರ್ಗಸೂಚಿಗಳಿಲ್ಲದಿರುವುದು ಸಮಸ್ಯೆಯಾಗಿದೆ ಎಂದು ಲೋಹಿತ್ ಕುಮಾರ್ ತಿಳಿಸಿದ್ದಾರೆ.
ಸೆನ್ಸಾರ್ ಮಂಡಳಿ ಟೀಸರ್‌ಗಳಿಗೂ ಸ್ಪಷ್ಟ ಮಾರ್ಗಸೂಚಿಗಳನ್ನು ರೂಪಿಸಬೇಕು ಎಂದು ದೂರು ಸಲ್ಲಿಸಿದ್ದೇನೆ ಎಂದು ಹೇಳಿದ್ದಾರೆ.
ಟಾಕ್ಸಿಕ್ ಟೀಸರ್ ಬಿಡುಗಡೆ ನಂತರ ಸೋಷಿಯಲ್ ಮೀಡಿಯಾಗಳಲ್ಲಿ ಸಾಕಷ್ಟು ಟೀಕೆ ವ್ಯಕ್ತವಾಗಿದೆ. ಟೀಸರ್‌ನಲ್ಲಿ ಅಸಭ್ಯ ದೃಶ್ಯಗಳಿವೆ. ಫ್ಯಾಮಿಲಿ ಜೊತೆ ಕುಳಿತು ನೋಡುವಂತೆ ಟೀಸರ್ ಇಲ್ಲ. ಅಸಭ್ಯ ದೃಶ್ಯ ಮಕ್ಕಳ ಮೇಲೆ ಪರಿಣಾಮ ಬೀರಬಹುದು ಇತ್ಯಾದಿ ಮಾತುಗಳು ಸಾಕಷ್ಟು ಕೇಳಿಬಂದಿದೆ. ನಿರ್ದೇಶಕಿ ಗೀತು ಮೋಹನ್ ದಾಸ್ ಹಾಗೂ ನಟ ಯಶ್ ವಿರುದ್ಧ ನೆಟ್ಟಿಗರು ವಾಗ್ದಾಳಿ ನಡೆಸಿದ್ದಾರೆ.
ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್ ಚಿತ್ರದ ಟೀಸರ್ ಆರಂಭದಲ್ಲಿ ಯಶ್ ಪಾತ್ರ ಕಾರಿನೊಳಗೆ ಮಹಿಳೆಯೊಂದಿಗೆ ಲೈಂಗಿಕ ಸಂಬಂಧ ಹೊಂದಿ ನಂತರ ಬಂದೂಕು ಹಿಡಿದು ಸಮಾಧಿ ಸ್ಥಳಕ್ಕೆ ಪ್ರವೇಶಿಸುವುದನ್ನು ತೋರಿಸುತ್ತದೆ. ಈ ದೃಶ್ಯ ಭಾರಿ ಚರ್ಚೆಗೆ ಗ್ರಾಸವಾಗಿದೆ.
—-





Be the first to comment