ಇತ್ತೀಚೆಗೆ ಸೂಪರ್ ಹಿಟ್ ಆದ ಬಾಲಿವುಡ್ ಚಿತ್ರ ಧುರಂದರ್ 2 ಕಥೆಯ ವಿವಾದವನ್ನು ಮಾತುಕತೆಯ ಮೂಲಕ ಬಗೆಹರಿಸಿಕೊಳ್ಳುವಂತೆ ಮುಂಬೈ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಕಥೆಗಾರ ಸಂತೋಷ್ ಕುಮಾರ್ ಅವರು ಧುರಂದರ್ ಚಿತ್ರದ ನಿರ್ದೇಶಕ ಆದಿತ್ಯ ಧರ್ ತಮ್ಮ ಸ್ಕ್ರಿಪ್ಟ್ ನ್ನು ನಕಲು ಮಾಡಿದ್ದಾರೆ ಎಂದು ಆರೋಪಿಸಿದ್ದರು. ಆದರೆ ಈ ಆರೋಪವನ್ನು ತಳ್ಳಿಹಾಕಿದ ಆದಿತ್ಯ ಧರ್, ತಮ್ಮ ಘನತೆಗೆ ಧಕ್ಕೆ ತರುವ ಸುಳ್ಳು ಆರೋಪ ಮಾಡಲಾಗಿದೆ ಎಂದು ಹೇಳಿ ಸಂತೋಷ್ ಕುಮಾರ್ ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದರು.
ನ್ಯಾಯಮೂರ್ತಿ ಅರಿಫ್ ಅವರಿದ್ದ ಪೀಠ ಈ ಪ್ರಕರಣವನ್ನು ವಿಚಾರಣೆ ನಡೆಸಿ ಈ ರೀತಿಯ ವಿವಾದಗಳನ್ನು ಸಾರ್ವಜನಿಕ ವೇದಿಕೆಯಲ್ಲಿ ಚರ್ಚಿಸುವುದಕ್ಕಿಂತ
ಉಭಯ ಪಕ್ಷಗಳು ಪರಸ್ಪರ ಮಾತುಕತೆಯ ಮೂಲಕ ವಿವಾದವನ್ನು ಬಗೆಹರಿಸಿಕೊಳ್ಳುವಂತೆ ಸಲಹೆ ನೀಡಿತು.
ಈಗ ಆದಿತ್ಯ ಧರ್ ಅವರ ಮುಂದಿನ ನಡೆಯ ಬಗ್ಗೆ ಗಮನ ಹರಿದಿದೆ.
ಧುರಂದರ್ 2 ದೇಶ, ವಿದೇಶಗಳಲ್ಲಿ ಬಿಡುಗಡೆ ಆಗಿ ಸೂಪರ್ ಹಿಟ್ ಎನಿಸಿದೆ. ರಣವೀರ್ ಸಿಂಗ್ ಪಾಕಿಸ್ತಾನಕ್ಕೆ ತೆರಳುವ ಗೂಢಚಾರಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.





Be the first to comment