ಚೈತ್ರಾ ಕುಂದಾಪುರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚನೆ

ಬಿಗ್ ಬಾಸ್ 12ರಲ್ಲಿ ಸ್ಪರ್ಧಿಸುತ್ತಿರುವ ಚೈತ್ರಾ ಕುಂದಾಪುರ ಮೇಲೆ ಕ್ರಮ ಕೈಗೊಳ್ಳುವಂತೆ ಹಿರಿಯ ನಾಗರಿಕರ ನ್ಯಾಯಾಲಯ ಮಹತ್ವದ ನಿರ್ದೇಶನ ನೀಡಿದೆ.

ಚೈತ್ರಾ ಅವರ ತಂದೆ ಬಾಲಕೃಷ್ಣ ನಾಯ್ಕ್ ಅವರು, ಪತ್ನಿ ಹಾಗೂ ಮಗಳಿಂದ ತಮಗೆ ದೈಹಿಕ ಮತ್ತು ಮಾನಸಿಕ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿ ಹಿರಿಯ ನಾಗರಿಕರ ನ್ಯಾಯಾಲಯವನ್ನು ಮೊರೆ ಹೋಗಿದ್ದರು.   ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ, ಚೈತ್ರಾ ಕುಂದಾಪುರ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ಕುಂದಾಪುರ ಪೊಲೀಸರಿಗೆ ಸೂಚನೆ ನೀಡಿದೆ.

“ಬಾಲಕೃಷ್ಣ ನಾಯ್ಕ್ ಅವರಿಗೆ ಯಾವುದೇ ರೀತಿಯ ದೈಹಿಕ ಅಥವಾ ಮಾನಸಿಕ ಕಿರುಕುಳ ನೀಡಬಾರದು. ಅವರು ತಮ್ಮ ಮನೆಯಲ್ಲಿ ನಿರ್ಭೀತಿಯಿಂದ ವಾಸಿಸುವಂತೆ ಅನುವು ಮಾಡಿಕೊಡಬೇಕು” ಎಂದು ಸ್ಪಷ್ಟಪಡಿಸಲಾಗಿದೆ. ಅಲ್ಲದೆ, ಈ ಕುರಿತು ಚೈತ್ರಾ ಕುಂದಾಪುರ ಅವರಿಂದ ಸೂಕ್ತ ಮುಚ್ಚಳಿಕೆ ಪಡೆಯುವಂತೆ ಪೊಲೀಸರಿಗೆ ನ್ಯಾಯಾಲಯದ ಆದೇಶದಲ್ಲಿ ಸೂಚಿಸಲಾಗಿದೆ.

ಬಾಲಕೃಷ್ಣ ನಾಯ್ಕ್ ಅವರಿಗೆ ಕರ್ನಾಟಕ ಪೋಷಕರು ಮತ್ತು ಹಿರಿಯ ನಾಗರಿಕರ ಪಾಲನೆ ಮತ್ತು ಕಲ್ಯಾಣ ಕಾಯ್ದೆಯ ಅಡಿಯಲ್ಲಿ ರಕ್ಷಣೆ ನೀಡಲಾಗಿದೆ. ಇನ್ಯಾಯಾಲಯದ ಆದೇಶದ ಅನ್ವಯ ಕುಂದಾಪುರ ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಳ್ಳಲಿದ್ದಾರೆ.

ಬಿಗ್ ಬಾಸ್ 12ರಲ್ಲಿ ಸ್ಪರ್ಧಿಸುತ್ತಿರುವ ನಡುವೆ  ಅವರ ವಿರುದ್ಧ ನ್ಯಾಯಾಲಯದ ಆದೇಶ ಹೊರಬಿದ್ದಿದೆ.

—–

Be the first to comment

Leave a Reply

Your email address will not be published. Required fields are marked *

Translate »
error: Content is protected !!