ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ‘ದಿ ಡೆವಿಲ್’ ಚಿತ್ರದ ವಿರುದ್ಧ ನೆಗೆಟಿವ್ ಪ್ರಚಾರ ನಡೆಯುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಎಲ್ಲ ನೆಗೆಟಿವ್ ವಿಷಯಗಳನ್ನು ತೆಗೆದುಹಾಕಲು ಚಿತ್ರತಂಡ ಕೋರ್ಟ್ನಿಂದ ಆದೇಶ ಪಡೆದುಕೊಂಡಿದೆ.
ಕೋರ್ಟ್ ಆದೇಶದ ಪ್ರಕಾರ, ‘ದಿ ಡೆವಿಲ್’ ಚಿತ್ರದ ಬಗ್ಗೆ ಅವಹೇಳನಕಾರಿ, ಮಾನಹಾನಿಕರ, ಅಪಪ್ರಚಾರಾತ್ಮಕ ವಿಮರ್ಶೆಗಳು, ನೆಗೆಟಿವ್ ಬರಹಗಳು ಅಥವಾ ರೇಟಿಂಗ್ಗಳನ್ನು ಯಾವುದೇ ವ್ಯಕ್ತಿ, ಸಂಸ್ಥೆ, ಚಾನೆಲ್ ಅಥವಾ ಸೋಶಿಯಲ್ ಮೀಡಿಯಾ ಖಾತೆಗಳು ಪ್ರಕಟಿಸುವಂತಿಲ್ಲ. ಈಗಾಗಲೇ ಪ್ರಕಟಗೊಂಡಿರುವ ಎಲ್ಲ ನೆಗೆಟಿವ್ ವಿಷಯಗಳನ್ನು ತಕ್ಷಣ ತೆಗೆದುಹಾಕಿ ನಿಷ್ಕ್ರಿಯಗೊಳಿಸಬೇಕು. ಇಲ್ಲವಾದರೆ ಅಗತ್ಯವಿದ್ದಲ್ಲಿ ಪ್ರಕರಣ ದಾಖಲಿಸಿ ಬಂಧನ ಸೇರಿದಂತೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಲಾಗಿದೆ.
ಚಿತ್ರಕ್ಕೆ ಅಥವಾ ನಿರ್ಮಾಪಕರಿಗೆ ಆರ್ಥಿಕ, ವಾಣಿಜ್ಯ ಹಾಗೂ ಗೌರವಕ್ಕೆ ಹಾನಿ ಉಂಟುಮಾಡುವ ಯಾವುದೇ ವಿಷಯಗಳನ್ನು ಪ್ರಸಾರ ಅಥವಾ ಹಂಚಿಕೆ ಮಾಡಿದಲ್ಲಿ ಸಂಬಂಧಪಟ್ಟವರು ವೈಯಕ್ತಿಕವಾಗಿ ಹೊಣೆಗಾರರಾಗುತ್ತಾರೆ. ಅವರ ವಿರುದ್ಧ ಸಿವಿಲ್ ಹಾಗೂ ಕ್ರಿಮಿನಲ್ ಕಾನೂನುಗಳ ಅಡಿಯಲ್ಲಿ ಕಠಿಣ ಕ್ರಮ ಜರುಗಿಸುವ ಅವಕಾಶವಿದೆ ಎಂದು ಕೋರ್ಟ್ ಆದೇಶದಲ್ಲಿ ಉಲ್ಲೇಖಿಸಲಾಗಿದೆ.
‘ಶ್ರೀ ಜೈಮಾ ಕಂಬೈನ್ಸ್’ ಬ್ಯಾನರ್ನಲ್ಲಿ ನಿರ್ಮಾಣವಾಗಿರುವ, ಮಿಲನ ಪ್ರಕಾಶ್ ನಿರ್ದೇಶನ ಮಾಡಿರುವ ‘ದಿ ಡೆವಿಲ್’ ಚಿತ್ರ ಡಿಸೆಂಬರ್ 11ರಂದು ರಾಜ್ಯಾದ್ಯಂತ ಬಿಡುಗಡೆಯಾಗಿ ಅಭಿಮಾನಿಗಳಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ. ಒಳ್ಳೆಯ ಮತ್ತು ಕೆಟ್ಟ ಎರಡು ಪಾತ್ರಗಳಲ್ಲಿ ದರ್ಶನ್ ಕಾಣಿಸಿಕೊಂಡಿದ್ದು, ಅಭಿಮಾನಿಗಳಿಗೆ ಭರ್ಜರಿ ಟ್ರೀಟ್ ಆಗಿದೆ.
—–





Be the first to comment