ರಚಿತಾ ರಾಮ್‍

‘ಕಲ್ಟ್’ ಚಿತ್ರಕ್ಕೆ ರಚಿತಾ ರಾಮ್‍ ನಾಯಕಿ

ಝೈದ್ ಖಾನ್‍ ಅಭಿನಯದ ‘ಕಲ್ಟ್’ ಚಿತ್ರಕ್ಕೆ ರಚಿತಾ ರಾಮ್‍ ನಾಯಕಿಯಾಗಿ ಆಯ್ಕೆಯಾಗಿದ್ದಾರೆ.

ಬನಾರಸ್’ ಬಿಡುಗಡೆಯಾಗಿ ಒಂದೂವರೆ ವರ್ಷಗಳಾದರೂ ಆ ಚಿತ್ರದಲ್ಲಿ ನಾಯಕನಾಗಿ ಕಾಣಿಸಿಕೊಂಡಿದ್ದ ಝೈದ್‍ ಖಾನ್‍ ಯಾವೊಂದು ಚಿತ್ರದಲ್ಲೂ ಕಾಣಿಸಿಕೊಂಡಿರಲಿಲ್ಲ. ಝೈದ್‍ ಈ ವರ್ಷದ ಆರಂಭದಲ್ಲಿ ‘ಕಲ್ಟ್’ ಎಂಬ ಚಿತ್ರ ಒಪ್ಪಿದ್ದರು. ಯುಗಾದಿಯ ಪ್ರಯುಕ್ತ ಪೋಸ್ಟರ್‍ ಬಿಡುಗಡೆ ಆಗಿತ್ತು. ಇದೀಗ ಚಿತ್ರಕ್ಕೆ ನಾಯಕಿಯ ಆಯ್ಕೆ ಆಗಿದೆ.

ಚಿತ್ರವನ್ನು ‘ಉಪಾಧ್ಯಕ್ಷ’ ಚಿತ್ರದ ನಿರ್ದೇಶಕ ಅನಿಲ್ ಕುಮಾರ್ ನಿರ್ದೇಶನ ಮಾಡುತ್ತಿದ್ದಾರೆ. ಅನಿಲ್  ಚಿತ್ರಕ್ಕೆ ಕಥೆ, ಚಿತ್ರಕಥೆ ಮತ್ತು ಸಂಭಾಷಣೆಯನ್ನು ರಚಿಸಿದ್ದು, ಈ ಚಿತ್ರದಲ್ಲಿ ಝೈದ್‍ ಖಾನ್‍ ವಿಭಿನ್ನ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಚಿತ್ರಕ್ಕೆ ‘ಬ್ಲಡಿ ಲವ್‍’ ಎಂಬ ಟ್ಯಾಗ್‍ಲೈನ್‍ ಇದೆ.  ಆಶ್ರಿತ್ ಸಿನಿಮಾಸ್ ಲಾಂಛನದಲ್ಲಿ ಸಿನಿಮಾ ನಿರ್ಮಾಣವಾಗಲಿದ್ದು, ಜೆ.ಎಸ್. ವಾಲಿ ಛಾಯಾಗ್ರಹಣ, ಅರ್ಜುನ್ ಜನ್ಯ ಸಂಗೀತ ಚಿತ್ರಕ್ಕಿದೆ. ಸದ್ಯದಲ್ಲೇ ಚಿತ್ರೀಕರಣ ಪ್ರಾರಂಭವಾಗಲಿದೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!