ಇದು ನಿಮ್ಮ ವಾಹಿನಿ ಕಲಾವೇದಿಕೆ ವತಿಯಿಂದ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಸಾಂಸ್ಕೃತಿಕ ಸಿಂಚನ ಕಾರ್ಯಕ್ರಮ ನಡೆಯಿತು.
ಬೆಂಗಳೂರಿನ ನಯನ ರಂಗಮಂದಿರದಲ್ಲಿ ನವೆಂಬರ್ 5 ರಂದು ಸಂಜೆ 4 ರಿಂದ 7ನೆಯ ಸಾಂಸ್ಕೃತಿಕ ಸಿಂಚನ ಕಾರ್ಯಕ್ರಮಗಳು ಅದ್ದೂರಿಯಾಗಿ ನಡೆದವು. ಕಾರ್ಯಕ್ರಮದಲ್ಲಿ ಉಪನ್ಯಾಸದ ಜೊತೆಗೆ ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಉಪನ್ಯಾಸ ಕಾರ್ಯಕ್ರಮವನ್ನು ಶಾಸಕ ಶರತ್ ಕುಮಾರ್ ಬಚ್ಚೇಗೌಡ ಅವರು ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಡಾ. ಮಹೇಂದ್ರ ನಾಥ್ ಶರ್ಮ, ಅವಧೂತ ಗ್ಲೋಬಲ್ ಫೌಂಡೇಶನ್ ಅಧ್ಯಕ್ಷರು ಇವರು ವಹಿಸಿದ್ದರು. ಪ್ರಶಸ್ತಿ ವಿತರಣೆಯನ್ನು ಅಬಕಾರಿ ಇಲಾಖೆಯ ಉಪ ಆಯುಕ್ತ ಡಾ. ಹಿರೇಮಠ ಬಿ ಆರ್, ಚಲನಚಿತ್ರ ಕಲಾವಿದ ಅನಿರುದ್ಧ ಜತಕರ ಅವರು ನೆರವೇರಿಸಿದರು.
ಮುಖ್ಯ ಅತಿಥಿಗಳಾಗಿ ಪವರ್ ಟಿವಿ ಕಾರ್ಯನಿರ್ವಾಹಕ ಸಂಪಾದಕ ಚಂದನ್ ಶರ್ಮ, ಚಲನಚಿತ್ರ ಸಾಹಿತಿ ವಿ ನಾಗೇಂದ್ರ ಪ್ರಸಾದ್, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಸದಸ್ಯ ಡಾ. ಆರ್ ಎ ಪ್ರಸಾದ್, ಕನ್ನಡ ಪರ ಹೋರಾಟಗಾರ ರೂಪೇಶ್ ರಾಜಣ್ಣ, ಸಮಾಜ ಸೇವಕ ಜಹೀರ್ ಅಹ್ಮದ್, ಶಿಕ್ಷಕ ಹಾಗೂ ಸಾಹಿತಿ ಡಾ. ಪೀ ವೈ ಇಮ್ಯನ್ ಯೆಲ್ ಅವರು ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಸಾಧಕ ಗಣ್ಯರಿಗೆ ಭಾರತ ರಾಷ್ಟ್ರ ವಿಭೂಷಣ ಪ್ರಶಸ್ತಿ, ಮಾಧ್ಯಮ ಸೇವಾ ರತ್ನ ಪ್ರಶಸ್ತಿ, ಕಲಾ ಸೇವಾ ರತ್ನ ಪ್ರಶಸ್ತಿ, ವಿಶೇಷ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಇದು ನಿಮ್ಮ ವಾಹಿನಿ ಕಲಾವೇದಿಕೆಯ ಪ್ರಧಾನ ಕಾರ್ಯದರ್ಶಿ ಕಿಶೋರ್ ಕುಮಾರ್ ಕೆಎಸ್ ಅವರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಕನ್ನಡ ಪರ ಆಸಕ್ತರು ಆಸಕ್ತಿಯಿಂದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
____
Be the first to comment