ವಿಜಯಲಕ್ಷ್ಮೀ ವಿರುದ್ಧ ಕಮೆಂಟ್: ಇಬ್ಬರ ಬಂಧನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅಶ್ಲೀಲ ಕಮೆಂಟ್ ವಿರುದ್ಧ ನೀಡಿದ್ದ ದೂರಿನ ಪ್ರಕರಣದಲ್ಲಿ ಇಬ್ಬರನ್ನು ಸೈಬರ್ ಕ್ರೈಂ  ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಬೆಂಗಳೂರಿನ ಚಿಕ್ಕಬಾಣಾವರದ ಆಟೋ ಚಾಲಕ ಚಂದ್ರು,  ದಾವಣಗೆರೆ ಮೂಲದ ಇಂಜಿನಿಯರ್ ನಿತಿನ್ ಎಂದು ಗುರುತಿಸಲಾಗಿದೆ. ಇವರು ಸಾಮಾಜಿಕ ಜಾಲತಾಣಗಳ ಮೂಲಕ ವಿಜಯಲಕ್ಷ್ಮೀ ಅವರಿಗೆ ಅಶ್ಲೀಲ ಪದಗಳಿಂದ ನಿಂದನೆ ಮಾಡಿದ್ದಾಗಿ ತಿಳಿದು ಬಂದಿದೆ. ಆರೋಪಿಗಳನ್ನು ಸೈಬರ್ ಕ್ರೈಂ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ವಿಜಯಲಕ್ಷ್ಮೀ ದೂರು ದಾಖಲಿಸಿದ ಬೆನ್ನಲ್ಲೇ ಆರೋಪಿಗಳು ತಾವು ಮಾಡಿದ ಅಶ್ಲೀಲ ಪೋಸ್ಟ್‌ಗಳನ್ನು ಡಿಲೀಟ್ ಮಾಡಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದರು. ಆದರೆ ಪೊಲೀಸರು ಐಪಿ ಅಡ್ರೆಸ್ ಆಧಾರದಲ್ಲಿ ಆರೋಪಿಗಳ ಮೂಲ ಪತ್ತೆ ಹಚ್ಚಿದ್ದಾರೆ. ಈ ಪ್ರಕರಣದಲ್ಲಿ ಇನ್ನಷ್ಟು ಮಂದಿ ಬಂಧನವಾಗುವ ಸಾಧ್ಯತೆ ಇದೆ.  ಆರೋಪಿಗಳು ಯಾವ ನಟನ ಅಭಿಮಾನಿಗಳು ಎಂಬುದು  ಸ್ಪಷ್ಟವಾಗಿಲ್ಲ.

ವಿಜಯಲಕ್ಷ್ಮೀ  ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಕಮೆಂಟ್‌ಗಳು ಹಾಗೂ ಮೆಸೇಜ್‌ಗಳು ಬರುತ್ತಿದ್ದ ಹಿನ್ನೆಲೆಯಲ್ಲಿ  ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದರು. ಆದರೆ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲಎಂದು ಇತ್ತೀಚೆಗೆ  ಸಾರ್ವಜನಿಕವಾಗಿ ಅಸಮಾಧಾನ ವ್ಯಕ್ತಪಡಿಸಿದ್ದರು. ಈ  ಬೆನ್ನಲ್ಲೇ  ಪೊಲೀಸರು ಕಾರ್ಯಪ್ರವೃತ್ತರಾಗಿ ಇಬ್ಬರನ್ನು ಬಂಧಿಸಿದ್ದಾರೆ.

—-

Be the first to comment

Leave a Reply

Your email address will not be published. Required fields are marked *

Translate »
error: Content is protected !!