ಶ್ರೀಬಸವೇಶ್ವರ ಕ್ರಿಯೇಷನ್ಸ್ ಲಾಂಛನದಲ್ಲಿ ಶರಣಪ್ಪ ಎಂ ಕೊಟಗಿ ಅವರು ನಿರ್ಮಿಸುತ್ತಿರುವ ‘ದಾರಿಯಾವುದಯ್ಯ ವೈಕುಂಠಕ್ಕೆ` ಚಿತ್ರದ ಮೊದಲ ಹಂತದ ಚಿತ್ರೀಕರಣ ರಾಮನಗರದ ಸ್ಮಶಾನದಲ್ಲಿ ೧೩ ದಿನಗಳ ಕಾಲ ನಡೆದಿದೆ. ದ್ವಿತೀಯ ಹಂತದ ಚಿತ್ರೀಕರಣ ಸದ್ಯದಲ್ಲೇ ಆರಂಭವಾಗಲಿದೆ. ವರ್ಧನ್ ತೀರ್ಥಹಳ್ಳಿ, ಪೂಜಾ, ಬಾಲ ರಾಜವಾಡಿ, ಶಿಬಾ, ಅರುಣ್ಮೂರ್ತಿ ಮುಂತಾದವರು ಈ ಹಂತದ ಚಿತ್ರೀಕರಣದಲ್ಲಿ ಭಾಗವಹಿಸಿದ್ದರು.
ವಿಶೆಷ ಕಥಾಹಂದರ ಹೊಂದಿರುವ ಈ ಚಿತ್ರದ ಬಹುತೇಕ ಭಾಗದ ಚಿತ್ರೀಕರಣ ಸ್ಮಶಾನದಲ್ಲಿ ನಡೆಯಲಿದೆ. ಚಿತ್ರೀಕರಣ ನಡೆಯುವ ವೇಳೆ ಕೆಲವು ವಿಚಿತ್ರ ಘಟನೆಗಳು ಅನುಭವಕ್ಕೆ ಬಂದಿದ್ದು, ಇಡೀ ಚಿತ್ರತಂಡ ದೇವರ ಬಳಿ ಮಂತ್ರಿಸಿದ ನಿಂಬೆಹಣ್ಣು ಇಟ್ಟುಕೊಂಡು ಚಿತ್ರೀಕರಣ ನಡೆಸಿರುವುದಾಗಿ ನಿರ್ದೇಶಕ ಸಿದ್ದು ಪೂರ್ಣಚಂದ್ರ ತಿಳಿಸಿದ್ದಾರೆ.
ಈ ಹಿಂದೆ ‘ಕೃಷ್ಣ ಗಾರ್ಮೆಂಟ್ಸ್’ ಚಿತ್ರವನ್ನು ನಿರ್ದೇಶಿಸಿದ್ದ ಸಿದ್ದು ಪೂರ್ಣಚಂದ್ರ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಚಿತ್ರಕ್ಕೆ ನಿರ್ದೇಶಕರೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದಿದ್ದಾರೆ. ಮನುಷ್ಯತ್ವ ಇಲ್ಲದೇ ಬರೀ ಹಣ ಅಂತ ಓಡಾಡಿಕೊಂಡು ಮಜಾ ಮಾಡುತ್ತಿದ್ದವನು ಆಕಸ್ಮಿಕವಾಗಿ ಸ್ಮಶಾನಕ್ಕೆ ಬರುತ್ತಾನೆ. ಅಲ್ಲಿಗೆ ಬಂದು ಹೋದ ಮೇಲೆ ಅವನ ಮನಸ್ಥಿತಿ ಹೇಗಿರುತ್ತದೆ ಅನ್ನೊ ಕಥಾ ಹಂದರ ಈ ಚಿತ್ರದಲ್ಲಿದೆ.
ವರ್ಧನ್, ‘ತಿಥಿ` ಖ್ಯಾತಿಯ ಪೂಜಾ, ಬಾಲ ರಾಜವಾಡಿ, ಶೀಬಾ, ಅರುಣ್ ಮೂರ್ತಿ, ಸ್ಪಂದನ, ಪ್ರಶಾಂತ್ರಾವ್ ವರ್ಕು ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ನಿತಿನ್ ಛಾಯಾಗ್ರಹಣ ಹಾಗೂ ರಾಜೀವ್ ಅವರ ಸಂಕಲನ ಈ ಚಿತ್ರಕ್ಕಿದೆ.
Pingback: https://www.mycatsupplystation.com