ಅನಂತ್ ನಾಗ್ʼಗೆ ‘ದಾದಾಸಾಹೇಬ್ ಫಾಲ್ಕೆ’ ಪ್ರಶಸ್ತಿ

ಕನ್ನಡ ಚಿತ್ರರಂಗದ  ಹಿರಿಯ ನಟ ಅನಂತ್ ನಾಗ್ ಅವರು 2024ನೇ ಸಾಲಿನ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಡಾ. ರಾಜ್‌ಕುಮಾರ್ ಅವರ ಬಳಿಕ ದಾದಾಸಾಹೇಬ್ ಫಾಲ್ಕೆ ಗೌರವಕ್ಕೆ ಪಾತ್ರರಾಗುತ್ತಿರುವ ಕನ್ನಡದ ಎರಡನೇ ನಟ ಎಂಬ ಹೆಗ್ಗಳಿಕೆಗೆ ಅನಂತ್ ನಾಗ್ ಪಾತ್ರರಾಗಿದ್ದಾರೆ. ಸೆ. 22ರಂದು ಗುಜರಾತ್‌ನ ಕೆವಾಡಿಯಾದಲ್ಲಿ ನಡೆಯಲಿರುವ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭದಲ್ಲಿ ಅನಂತ್ ನಾಗ್ ಅವರಿಗೆ ‘ದಾದಾಸಾಹೇಬ್ ಫಾಲ್ಕೆ’ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಆಯ್ಕೆ ಸಮಿತಿಯ ಶಿಫಾರಸಿನ ಮೇರೆಗೆ 2024ನೇ ಸಾಲಿನ ಪ್ರಶಸ್ತಿಗೆ ಅನಂತ್ ನಾಗ್ ಅವರನ್ನು ಆಯ್ಕೆ ಮಾಡಲಾಗಿದೆ. ಇದರಿಂದ ಕನ್ನಡ ಚಿತ್ರರಂಗದಲ್ಲಿ ಸಂಭ್ರಮ ಮನೆ ಮಾಡಿದೆ.

ಹಲವು ದಶಕಗಳಿಂದ ಚಿತ್ರರಂಗದಲ್ಲಿ ಸಕ್ರಿಯರಾಗಿರುವ ಅನಂತ್ ನಾಗ್ ತಮ್ಮ ಸಹಜ ಅಭಿನಯ, ಪಾತ್ರಗಳ  ವೈವಿಧ್ಯತೆ ಹಾಗೂ  ತ ಪ್ರತಿಭೆಯ ಮೂಲಕ ಪ್ರೇಕ್ಷಕರ ಮನಸ್ಸಿನಲ್ಲಿ ವಿಶೇಷ ಸ್ಥಾನ ಪಡೆದುಕೊಂಡಿದ್ದಾರೆ. ನಾಯಕನ ಪಾತ್ರದಿಂದ ಪೋಷಕ ಪಾತ್ರಗಳವರೆಗೆ ವಿಭಿನ್ನ ಪಾತ್ರಗಳಿಗೆ ಜೀವ ತುಂಬಿರುವ ಅವರು ತಮ್ಮ ನಟನಾ ಶೈಲಿಯಿಂದ ಕನ್ನಡ ಚಿತ್ರರಂಗದ ಮೇಲೆ ಅಚ್ಚಳಿಯದ ಛಾಪು ಮೂಡಿಸಿದ್ದಾರೆ.

ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ  ಘೋಷಣೆಯನ್ನು ಪ್ರಧಾನಿಯವರೇ ಮಾಡಿರುವುದು ತಮ್ಮ ಪಾಲಿಗೆ ವಿಶೇಷ ಸಂತಸದ ವಿಚಾರ ಎಂದು ಅನಂತ್ ನಾಗ್ ಹೇಳಿದ್ದಾರೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!